ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮವು ಮೇ 17 ರಂದು ನಡೆಯುತ್ತಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ಶಾಸಕ ಜಿ.ಡಿ. ಹರೀಶ್‌ಗೌಡ ತಿಳಿಸಿದರು.
ಸಮಾವೇಶದಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ, ಸುತ್ತಮುತ್ತಲ ಕ್ಷೇತ್ರದಿಂದ ಸುಮಾರು 35 ಸಾವಿರ ಜನರು ಭಾಗವಹಿಸಲಿದ್ದಾರೆ. ಭಾನುವಾರ ನಡೆಯುವ ಕಾರ್ಯಕ್ರಮದ ಮೂಲಕ ರಾಜ್ಯಕ್ಕೆ ಒಂದು ಸಂದೇಶ ಹೋಗಲಿದ್ದು, ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಕೇಳುತ್ತಿದ್ದವರಿಗೆ ಉತ್ತರ ಸಿಗಲಿದೆ ಎಂದರು.
ಮಾಜಿ ಸಚಿವ ಸಾ.ರಾ. ಮಹೇಶ್ ಮಾತನಾಡಿ, ಮೈಸೂರು ಜಿಲ್ಲೆಯ ಜೆಡಿಎಸ್ ಕಾರ್ಯಕ್ರಮವನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಡಬೇಕು ಹಾಗೂ ಖುದ್ದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮಕ್ಕೆ ಬರಬೇಕು ಎಂದು ಕೇಳಿಕೊಂಡಿದ್ದೆವು. ಸಮಾವೇಶಕ್ಕೆ ಕುಮಾರಸ್ವಾಮಿ ಬರುತ್ತಿದ್ದಾರೆ. ಈ ಕಾರ್ಯಕ್ರಮ ಯಶಸ್ವಿ ಮಾಡಲು ಎಲ್ಲರೂ ಪಣ ತೊಟ್ಟಿದ್ದಾರೆ ಎಂದರು.