ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಲೆ ಮನುಷ್ಯನ ಜೀವನದಲ್ಲಿ ಉತ್ಸಾಹ, ಸೃಜನಶೀಲತೆ ಹಾಗೂ ಸಕಾರಾತ್ಮಕ ಚಿಂತನೆ ಹೆಚ್ಚಿಸುತ್ತದೆ. ಅದರಲ್ಲೂ ಭರತನಾಟ್ಯವು ನೃತ್ಯ, ಸಂಗೀತ, ಸಾಹಿತ್ಯ ಮತ್ತು ಅಭಿನಯವನ್ನು ಸಮನ್ವಯಗೊಳಿಸುವ ಸಮೃದ್ಧ ಕಲೆಯಾಗಿದ್ದು, ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.