ಕ್ರಾಂತಿಕಾರಿ ಬದಲಾವಣೆ ತಂದ ಮಹನೀಯ

ಕೆ.ಆರ್.ನಗರದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಜಯಂತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಜಿ.ಸುರೇಂದ್ರಮೂರ್ತಿ, ಕೋಳಿಪ್ರಕಾಶ್, ತಿಮ್ಮಶೆಟ್ಟಿ, ಕಾಟ್ನಾಳು ಮಹದೇವ್, ಕೆ.ಮೇಘನಾ, ಎಚ್.ಎಲ್.ಶಂಕರಮೂರ್ತಿ ಇನ್ನಿತರರು ಇದ್ದರು.
ಕೆ.ಆರ್.ನಗರದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಜಯಂತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಜಿ.ಸುರೇಂದ್ರಮೂರ್ತಿ, ಕೋಳಿಪ್ರಕಾಶ್, ತಿಮ್ಮಶೆಟ್ಟಿ, ಕಾಟ್ನಾಳು ಮಹದೇವ್, ಕೆ.ಮೇಘನಾ, ಎಚ್.ಎಲ್.ಶಂಕರಮೂರ್ತಿ ಇನ್ನಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ ಬಣ್ಣನೆ

ಕೆ.ಆರ್.ನಗರ:

ಸಮ ಸಮಾಜದ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ನೀಡಿದ ಕೊಡುಗೆಗಳು ಅಪಾರವಾದದ್ದು ಎಂದು ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ ಹೇಳಿದರು.

ಪಟ್ಟಣದ ತಾಲೂಕು ಆಡಳಿತಸೌಧದ ಸಭಾಂಗಣದಲ್ಲಿ ಗುರುವಾರ ತಾಲೂಕು ಪಂಚಾಯಿತಿ, ಪುರಸಭೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಾವನೂರು ಅರಸು ಯುವಕರ ಸೇವಾ ಅಭಿವೃದ್ಧಿ ಸಂಘದಿಂದ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 111ನೇ ಜಯಂತಿಯಲ್ಲಿ ಮಾತನಾಡಿದರು. ಸಮಾಜದಲ್ಲಿದ್ದ ಜಾತಿ, ಜಾತಿಗಳ ನಡುವಿನ ಅಂತರವನ್ನು ತೊಲಗಿಸಲು ಅನೇಕ ಕಾರ್ಯಕ್ರಮಗಳನ್ನು ತಂದರು ಎಂದು ಸ್ಮರಿಸಿದರು.
ಸಮಾಜದಲ್ಲಿ ಬೇರೂರಿದ್ದ ಶೀಮಂತರು ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡುವ ಸಲುವಾಗಿ ಭೂ ಸುಧಾರಣೆ ಕಾಯ್ದೆ ತಂದು ಉಳುವವನೇ ಭೂಮಿಯ ಒಡೆಯ ಎಂಬ ಐತಿಹಾಸಿಕ ಕಾರ್ಯಕ್ರಮವನ್ನು ಜಾರಿಗೊಳಿಸಿ ಲಕ್ಷಾಂತರ ಭೂ ರಹಿತರಿಗೆ ಭೂ ಒಡೆತನವನ್ನು ನೀಡಿದರು. ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳಲ್ಲೊಂದಾದ ಜೀತ ಪದ್ಧತಿ ನಿರ್ಮೂಲನೆಯಂತಹ ಕ್ರಾಂತಿಕಾರಕ ಬದಲಾವಣೆ ತಂದರು ಎಂದು ಹೇಳಿದರು.
ಕೆಸ್ತೂರು ಕೊಪ್ಪಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಚ್.ಬಿ.ಲೋಕೇಶ್ ಪ್ರಧಾನ ಭಾಷಣ ಮಾಡಿದರು. ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ತಿಮ್ಮಶೆಟ್ಟಿ, ಬಿಸಿಎಂ ಇಲಾಖೆ ನಿವೃತ್ತ ಅಧಿಕಾರಿ ರಾಮಯ್ಯ ಮಾತನಾಡಿದರು.
ತಾಲೂಕಿನ ಬಿಸಿಎಂ ವಸತಿ ನಿಲಯಗಳಲ್ಲಿ ಕಲಿತು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ದೇವರಾಜ ಅರಸು ಜಯಂತಿ ಹಿನ್ನೆಲೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪುರಸಭಾ ಮಾಜಿ ಅಧ್ಯಕ್ಷ ಕೋಳಿಪ್ರಕಾಶ್, ತಾಲೂಕು ಉಪ್ಪಾರರ ಸಂಘದ ಅಧ್ಯಕ್ಷ ಕಾಟ್ನಾಳು ಮಹದೇವ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಮೇಘನಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎಸ್.ಸುಹಾಸಿನಿ, ರೈತಮುಖಂಡೆ ನೇತ್ರಾವತಿ, ಬಿಸಿಎಂ ವಸತಿ ನಿಲಯ ಪಾಲಕರಾದ ಜಿ.ಜೆ.ಮಹೇಶ್, ಎಸ್.ಮಧುಸೂದನ್, ಲೋಕೇಶ್, ಗೀತಾ, ದಿಲೀಪ್, ಸತೀಶ್, ವೆಂಕಟೇಶ, ಆಶಾ, ಸಿಬ್ಬಂದಿ ದಿವ್ಯಾ, ಪ್ರದೀಪ್, ಬೇಬಿಶ್ರೀ, ಬೆನಕರಾಜ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net