ದೇಶದ ಸಾಮಾಜಿಕ, ಆರ್ಥಿಕ ಪ್ರಗತಿಗೆ ಆರೋಗ್ಯಪೂರ್ಣ ಸಮುದಾಯವೇ ಭದ್ರ ಅಡಿಪಾಯ: ಡಾ. ದಿನೇಶ್ ಅಭಿಮತ

ಅನ್ವೇಷಣಾ ಸೇವಾ ಟ್ರಸ್ಟ್‌ನಿಂದ ನಗರದಲ್ಲಿ ಆಯೋಜಿಸಿದ್ದ ಕಾಯಕ್ರಮದಲ್ಲಿ ವೈದ್ಯರಿಗೆ ವೈದ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಬಿ.ದಿನೇಶ್, ಡಾ.ವಿ. ಲಕ್ಷ್ಮೀನಾರಾಯಣ, ಡಾ.ಸಿ.ಪಿ.ಮಧು, ಡಾ.ಎಚ್.ಬಿ.ರಾಜಶೇಖರ್, ಅಮರ್‌ನಾಥ್‌ರಾಜೇಅರಸ್, ಡಾ.ಎಂ.ಜಿ.ಆರ್.ಅರಸ್, ಎಚ್.ಎಂ.ಟಿ.ಲಿಂಗರಾಜೇ ಅರಸ್ ಇತರರು ಇದ್ದರು.
ಅನ್ವೇಷಣಾ ಸೇವಾ ಟ್ರಸ್ಟ್‌ನಿಂದ ನಗರದಲ್ಲಿ ಆಯೋಜಿಸಿದ್ದ ಕಾಯಕ್ರಮದಲ್ಲಿ ವೈದ್ಯರಿಗೆ ವೈದ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಬಿ.ದಿನೇಶ್, ಡಾ.ವಿ. ಲಕ್ಷ್ಮೀನಾರಾಯಣ, ಡಾ.ಸಿ.ಪಿ.ಮಧು, ಡಾ.ಎಚ್.ಬಿ.ರಾಜಶೇಖರ್, ಅಮರ್‌ನಾಥ್‌ರಾಜೇಅರಸ್, ಡಾ.ಎಂ.ಜಿ.ಆರ್.ಅರಸ್, ಎಚ್.ಎಂ.ಟಿ.ಲಿಂಗರಾಜೇ ಅರಸ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವೈದ್ಯರ ನಿಸ್ವಾರ್ಥ ಸೇವೆಯಿಂದಲೇ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ
  • ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರ ಆರೋಗ್ಯ ಕಾಪಾಡುವ ವೈದ್ಯರನ್ನು ಪ್ರತಿಯೊಬ್ಬರೂ ಗೌರವಿಸಬೇಕು
ಮೈಸೂರು:ಆರೋಗ್ಯಕರ ಸಮುದಾಯವು ದೇಶದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಭದ್ರ ಅಡಿಪಾಯವಾಗುತ್ತದೆ ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಬಿ.ದಿನೇಶ್ ಹೇಳಿದರು.
ಅನ್ವೇಷಣಾ ಸೇವಾ ಟ್ರಸ್ಟ್‌ನಿಂದ ನಗರದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್‌ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ವೈದ್ಯರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯವಾಗಿದೆ. ಅವರ ನಿಸ್ವಾರ್ಥ ಸೇವೆಯಿಂದಲೇ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ದೇಶದ ಸಮಗ್ರ ಅಭಿವೃದ್ಧಿಗೆ ಆರೋಗ್ಯವಂತ ಸಮಾಜ ಅತ್ಯಗತ್ಯ. ಹಾಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರ ಆರೋಗ್ಯ ಕಾಪಾಡುವ ವೈದ್ಯರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.
ಇಂದಿನ ಒತ್ತಡದ ಜೀವನಶೈಲಿಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ಅಗತ್ಯವಿದೆ. ಸಮತೋಲಿತ ಆಹಾರ ಸೇವನೆ, ನಿಯಮಿತ ಯೋಗಾಭ್ಯಾಸ ಹಾಗೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದು ಎಂದು ಸಲಹೆ ನೀಡಿದರು.
ನಗರ ಪ್ರದೇಶಗಳಿಗೆ ಮಾತ್ರ ವೈದ್ಯಕೀಯ ಸೇವೆ ಸೀಮಿತವಾಗದೆ, ಗ್ರಾಮೀಣ ಭಾಗಗಳಿಗೂ ಗುಣಮಟ್ಟದ ಆರೋಗ್ಯ ಸೇವೆ ತಲುಪಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಭಿಪ್ರಾಯಪಟ್ಟರು.
ಡಾ.ಬಿ.ಸಿ.ರಾಯ್ ಅವರ ಸಾಧನೆ ಕುರಿತು ಡಾ.ವಿ. ಲಕ್ಷ್ಮೀನಾರಾಯಣ ಮಾತನಾಡಿದರು. ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ಮೈಸೂರು ಶಾಖೆ ಅಧೀಕ್ಷಕ ಡಾ.ಕೆ.ಎಸ್.ಸದಾನಂದ ಅವರು ಡಾ.ಬಿ.ಸಿ.ರಾಯ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಜೆಎಸ್‌ಎಸ್ ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು, ರಾಜಶೇಖರ ಆಸ್ಪತ್ರೆ ಸಂಸ್ಥಾಪಕ ಡಾ.ಎಚ್.ಬಿ.ರಾಜಶೇಖರ್, ಅನ್ವೇಷಣಾ ಸೇವಾ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಅಮರ್‌ನಾಥ ರಾಜೇ ಅರಸ್, ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್, ಉಪಾಧ್ಯಕ್ಷ ಎಚ್.ಎಂ.ಟಿ.ಲಿಂಗರಾಜೇ ಅರಸ್ ಇತರರು ಇದ್ದರು.
ಇದೇ ಸಂದರ್ಭದಲ್ಲಿ ವೈದ್ಯರಾದ ಡಾ.ಎಂ.ಪಶುಪತಿ, ಡಾ.ನಯಾಜ್ ಪಾಷ, ಡಾ.ದಿಲ್ನಾ ರಾಜ್, ಡಾ.ಎಚ್.ಕೆ.ಸೌಮ್ಯಶ್ರೀ, ಡಾ.ವೇಣು ಗೋಪಾಲರಾಜೇ ಅರಸ್ ಇತರರಿಗೆ ವೈದ್ಯ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net