ಸರ್ಕಾರಿ ಯೋಜನೆ ಗ್ರಾಮೀಣರಿಗೆ ತಲುಪಿಸಲು ಪ್ರಾಮಾಣಿಕ ಯತ್ನ

 ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿರ್ಗಮಿತ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀಗೂರು ವಿಜಯಕುಮಾರ್, ಉಪಾಧ್ಯಕ್ಷೆ ಯಶೋದಮ್ಮ, ಗ್ರಾಪಂ ಮಾಜಿ ಅಧ್ಯಕ್ಷರಾದ ಅನಿಲ್‌ಕುಮಾರ್, ಎಚ್.ಎನ್.ಕಾಮರಾಜ್, ಛಾಯಾಮಣಿ ಮಹಾದೇವ್, ರವಿಕುಮಾರ್ ಇತರರು ಇದ್ದರು.
ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ನಿರ್ಗಮಿತ ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀಗೂರು ವಿಜಯಕುಮಾರ್, ಉಪಾಧ್ಯಕ್ಷೆ ಯಶೋದಮ್ಮ, ಗ್ರಾಪಂ ಮಾಜಿ ಅಧ್ಯಕ್ಷರಾದ ಅನಿಲ್‌ಕುಮಾರ್, ಎಚ್.ಎನ್.ಕಾಮರಾಜ್, ಛಾಯಾಮಣಿ ಮಹಾದೇವ್, ರವಿಕುಮಾರ್ ಇತರರು ಇದ್ದರು.
Published on

ಹಿಟ್ನೆ ಹೆಬ್ಬಾಗಿಲು ಗ್ರಾಪಂ ಅಧ್ಯಕ್ಷ ಸೀಗೂರು ವಿಜಯಕುಮಾರ್ ಹೇಳಿಕೆ

ಪಿರಿಯಾಪಟ್ಟಣ: ಕಳೆದ ಐದು ವರ್ಷಗಳ ಅವಧಿಯಲ್ಲಿ ಸರ್ಕಾರಿ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಯತ್ನ ಮಾಡಿದ್ದೇನೆ ಎಂದು ಹಿಟ್ನೆ ಹೆಬ್ಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀಗೂರು ವಿಜಯಕುಮಾರ್ ತಿಳಿಸಿದರು.
ತಾಲೂಕಿನ ಹಿಟ್ನೆ ಹೆಬ್ಬಾಗಿಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅವಧಿ ಪೂರ್ಣಗೊಂಡ ಸದಸ್ಯರಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಹಿಟ್ನೆಹೆಬ್ಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ವರ್ಗದ ಜನರು ಇದ್ದು, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಆಡಳಿತ ನಡೆಸಿದ್ದು, ಈ ಸಂದರ್ಭದಲ್ಲಿ ಸಚಿವ ಕೆ.ವೆಂಕಟೇಶ್ ಅವರ ನಿರಂತರ ಸಂಪರ್ಕ, ಸಲಹೆ, ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಗ್ರಾಮಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದರು.
ಕೆಪಿಸಿಸಿ ಸದಸ್ಯ ಅನಿಲ್‌ಕುಮಾರ್ ಮಾತನಾಡಿ, ನಮ್ಮ ಗ್ರಾಪಂನ ಎಲ್ಲ ಸದಸ್ಯರು ಪಕ್ಷಭೇದ ಮರೆತು ಒಟ್ಟಾಗಿ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ದುಡಿದಿದ್ದೇವೆ. ಯಾವುದೇ ಸಮಸ್ಯೆ ಇದ್ದರೂ ತಕ್ಷಣದಲ್ಲಿ ಬಗೆಹರಿಸುವ ಕೆಲಸವನ್ನು ಮಾಡಿದ್ದೇವೆ ಈ ಎಲ್ಲ ಕೆಲಸಗಳಿಗೂ ಸಚಿವ ವೆಂಕಟೇಶ್ ಅವರು ಮಾರ್ಗದರ್ಶನ ನೀಡಿದ್ದಾರೆ. ಹಾಗಾಗಿ ಐದು ವರ್ಷ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.
ಗ್ರಾಪಂ ಉಪಾಧ್ಯಕ್ಷೆ ಯಶೋದಮ್ಮ, ಮಾಜಿ ಅಧ್ಯಕ್ಷ ರಾದ ಎಚ್.ಎನ್.ಕಾಮರಾಜ್, ಛಾಯಾಮಣಿ ಮಹಾದೇವ್, ರವಿಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ.ಮಂಜುನಾಯ್ಕ, ಸದಸ್ಯರಾದ ಸರೋಜಾ , ವನಜಾಕ್ಷಮ್ಮ, ಸುಧಾ, ಎಚ್.ಸಿ.ಮಹದೇವ್, ವರನಂದಿ, ಸೌಮ್ಯಾ, ಬಿಲ್ಲಹಳ್ಳಿ ಮಹಾದೇವ್, ಶಿವಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಆಯಿತನಳ್ಳಿ ಮಹಾದೇವ್, ಮುಖಂಡರಾದ ನಾಗೇಗೌಡ, ಗಣೇಶ್, ಪಿಡಿಒ ನಾಗೇಂದ್ರಕುಮಾರ್, ಕಾರ್ಯದರ್ಶಿ ಬಸವರಾಜು, ಬಿಲ್ ಕಲೆಕ್ಟರ್ ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net