ಎಐ ಯುಗದಲ್ಲಿ ಸಾಧನೆಗೆ ಭರಪೂರ ಅವಕಾಶ

 ಜೆಎಸ್‌ಎಸ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮವನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ ಉದ್ಘಾಟಿಸಿದರು. ತಹಸೀನಾ,  ಗೋಪಿನಾಥ್, ಪ್ರೊ.ಎಂ. ಪ್ರಭು,  ಜಿ.ಕಾರ್ತಿಕ್ ಇದ್ದರು.
ಜೆಎಸ್‌ಎಸ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮವನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ ಉದ್ಘಾಟಿಸಿದರು. ತಹಸೀನಾ, ಗೋಪಿನಾಥ್, ಪ್ರೊ.ಎಂ. ಪ್ರಭು, ಜಿ.ಕಾರ್ತಿಕ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರೊ.ಬಿ.ವಿ.ಸಾಂಬಶಿವಯ್ಯ ಅಭಿಮತ
  • ಕೃತಕ ಬುದ್ಧಿಮತ್ತೆ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ
ಮೈಸೂರು: ಕೃತಕ ಬುದ್ಧಿಮತ್ತೆ(ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಯುವಜನತೆಗೆ ಸಾಕಷ್ಟು ಅವಕಾಶ ಒದಗಿಸಿದೆ ಎಂದು ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ.ಸಾಂಬಶಿವಯ್ಯ ಹೇಳಿದರು.
ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೃತಕ ಬುದ್ಧಿಮತ್ತೆ ಕಾಲವಿದು. ಈ ತಂತ್ರಜ್ಞಾನ ವಿಸ್ತಾರವಾಗಿ ವ್ಯಾಪಿಸಿಕೊಳ್ಳುತ್ತಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ ಯುವಜನತೆಗೆ ಸಾಕಷ್ಟು ಅವಕಾಶ ಒದಗಿಸಿದೆ. ಇದನ್ನು ವಿದ್ಯಾರ್ಥಿಗಳು ಗ್ರಹಿಸಬೇಕು ಎಂದರು. 
ಇದು ತಂತ್ರಜ್ಞಾನದ ಯುಗವಾಗಿದೆ. ಮಾನವನ ಬದುಕಿನ ಪ್ರತಿಯೊಂದು ಕೆಲಸ ಕಾರ್ಯದಲ್ಲಿ ತಂತ್ರಜ್ಞಾನ ಹೆಚ್ಚು ಪ್ರಭಾವ ಬೀರುತ್ತಿದೆ. ತಂತ್ರಜ್ಞಾನವಿಲ್ಲದ ಬದುಕನ್ನು ಊಹಿಸಿಕೊಳ್ಳುವುದು ಅಸಾಧ್ಯ. ಇದು ಹಿಂದಿನ ಕಾಲದಿಂದಲೂ ಇದ್ದು, ಕಾಲದಿಂದ ಕಾಲಕ್ಕೆ ನವೀಕರಣಗೊಂಡು ಬಂದಿವೆ. 
ಈಗ ತಂತ್ರಜ್ಞಾನ ಹಲವು ಆಯಾಮಗಳಲ್ಲಿ ನವೀಕರಣಗೊಳುತ್ತಿದೆ. ಅದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡು ನವೀಕರಣಗೊಂಡ ತಂತ್ರಜ್ಞಾನದೊಂದಿಗೆ ಹೆಜ್ಜೆಯನಿಡಬೇಕು ಎಂದರು.
ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆ ಮತ್ತು ಜ್ಞಾನ ಔದ್ಯೋಗಿಕ ಕ್ಷೇತ್ರದಲ್ಲಿ ಹೆಚ್ಚು ಅವಕಾಶ ಒದಗಿಸುತ್ತಿದೆ. ಇದನ್ನು ಅರ್ಥ ಮಾಡಿಕೊಂಡು ತಂತ್ರಜ್ಞಾನದ ಬಳಕೆ ಮತ್ತು ಅದರ ಬಗೆಗಿನ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಆಫ್ರೆಂಟ್ ಪ್ರೈ.ಲಿ. ಹಿರಿಯ ವ್ಯವಸ್ಥಾಪಕಿ ತಹಸೀನಾ, ಎಪಿ ಕ್ಲಸ್ಟರ್ ಮುಖ್ಯಸ್ಥ ಗೋಪಿನಾಥ್ ಅವರು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಕುರಿತು ತರಬೇತಿ ನೀಡಿದರು. ಪ್ರಾಂಶುಪಾಲ ಪ್ರೊ.ಎಂ.ಪ್ರಭು, ಉದ್ಯೋಗ ಕೋಶ ನಿಯೋಜನಾಧಿಕಾರಿ ಜಿ.ಕಾರ್ತಿಕ್ ಉಪಸ್ಥಿತರಿದ್ದರು.  
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net