ನಿರಂತರ ಪರಿಶ್ರಮದಿಂದ ಸಾಧನೆ ಮಾಡಿ

ಕಂಪಲಾಪುರ ಸಮೀಪದ ಸುಂಡವಾಳು ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಬಿಇಟ ರವಿಪ್ರಸನ್ನ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಸಿಆರ್‌ಪಿ ಸುದರ್ಶನ್, ಮುಖ್ಯ ಶಿಕ್ಷಕಿ ಪುಷ್ಪಾವತಮ್ಮ, ಎಸ್‌ಡಿಎಮ್‌ಸಿ ಅಧ್ಯಕ್ಷ ಸುರೇಶ್ ಇತರರಿದ್ದರು.
ಕಂಪಲಾಪುರ ಸಮೀಪದ ಸುಂಡವಾಳು ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಬಿಇಟ ರವಿಪ್ರಸನ್ನ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಸಿಆರ್‌ಪಿ ಸುದರ್ಶನ್, ಮುಖ್ಯ ಶಿಕ್ಷಕಿ ಪುಷ್ಪಾವತಮ್ಮ, ಎಸ್‌ಡಿಎಮ್‌ಸಿ ಅಧ್ಯಕ್ಷ ಸುರೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ಸಲಹೆ
ಕಂಪಲಾಪುರ: ವಿದ್ಯಾರ್ಥಿ ಜೀವನದಲ್ಲೇ ಉತ್ತಮ ಶಿಕ್ಷಣ ಪಡೆದುಕೊಂಡು, ದೃಢವಾದ ಸಂಕಲ್ಪ ಮತ್ತು ನಿರಂತರ ಪರಿಶ್ರಮದಿಂದ ಸಾಧನೆ ಮಾಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಸುಂಡವಾಳು ಗ್ರಾಮದಲ್ಲಿ ಸೋಮವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಹಾಗೂ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ ಮಾಡಿ ಮಾತನಾಡಿದರು.
ಸುಂಡವಾಳು ಗ್ರಾಮದಲ್ಲಿ ಎಂಟನೇ ತರಗತಿವರೆಗೆ ಮಾತ್ರ ಶಾಲೆ ಇತ್ತು. ಸ್ಥಳೀಯರ ಪರಿಶ್ರಮದಿಂದ ನೂತನವಾಗಿ ಪ್ರೌಢಶಾಲೆ ಆರಂಭಗೊಂಡಿದ್ದು ವಿಶೇಷವಾಗಿದೆ ಎಂದು ಹೇಳಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರದ ಸವಲತ್ತು ಹೆಚ್ಚು ಸಿಗಬೇಕು. ಪ್ರತಿಯೊಬ್ಬರು ವೈಯಕ್ತಿಕ ವಿಚಾರಗಳನ್ನು ಬದಿಗೊತ್ತಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ಕಿವಿಮಾತು ಹೇಳಿದರು
ಅಕ್ಷರ ದಾಸೋಹ ಸಹಾಯಕ ನಿರ್ದೇಶಕಡಾ. ಪ್ರಶಾಂತ್ ಮಾತನಾಡಿ, ಹಳ್ಳಿಯ ಪ್ರತಿಭೆಗಳು ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಪ್ರತಿಭಾವಂತರಾಗಬೇಕು. ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಬೋಧಕರು ಇದ್ದಾರೆ . ಇದನ್ನ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಗಣ್ಯರು ಮಕ್ಕಳಿಗೆ ಗುಲಾಬಿ ಹೂ ನೀಡುವುದರ ಮೂಲಕ ಶಾಲೆಗೆ ಬರಮಾಡಿಕೊಂಡರು. ಎಲ್ಲ ಮಕ್ಕಳಿಗೂ ಸಮವಸ ವಿತರಿಸಲಾಯಿತು.
ಸಿಆರ್‌ಪಿ ಸುದರ್ಶನ್, ರಾಜ್ಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕ ಎಸ್ ಬಿ ಮಹದೇವ್, ಯ. ಮಹದೇವ್, ಕೆಎಸ್‌ಒಯು ಪ್ರಾದೇಶಿಕ ನಿರ್ದೇಶಕ ಅರುಣ್ ಕುಮಾರ್, ಮುಖ್ಯ ಶಿಕ್ಷಕರಾದ ಪುಷ್ಪಾವತಮ್ಮ, ರವಿ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್, ಸದಸ್ಯರಾದ ಕುಮಾರ್, ಮಂಜು, ಶ್ರೀನಿವಾಸ್, ಸೋಮು, ಸ್ವಾಮಿ, ಶಿಕ್ಷಕರಾದ ರಿಯಾಜ್, ಕೃಷ್ಣೆಗೌಡ, ಜಗದೀಶ್, ವಿಶ್ವನಾಥ್, ಸುಧಾಮಣಿ, ಕವಿತಾ, ರಮೇಶ್, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net