ಸದ್ವಿದ್ಯಾ ಸೆಮಿ-ರೆಸಿಡೆನ್ಶಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ವಿಜಯನಗರದ ಸದ್ವಿದ್ಯಾ ಸೆಮಿ-ರೆಸಿಡೆನ್ಶಿಯಲ್ ಪಿಯು ಕಾಲೇಜಿನ ಸಾಧಕ ಕ್ರೀಡಾಪಟುಗಳೊಂದಿಗೆ ಕಾವೇರಿ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಎನ್.ಡಿ.ಗೋಪಿನಾಥ್, ಉಪಾಧ್ಯಕ್ಷ ಎಸ್.ಬಾಲಾಜಿ, ಪ್ರಾಂಶುಪಾಲರಾದ ಡಾ.ಜಿ.ಆರ್.ಕವಿತಾ, ದೈಹಿಕ ಶಿಕ್ಷಣ ನಿರ್ದೇಶ ಎನ್.ಡಿ.ಜಗನ್ನಾಥ್ ಇದ್ದರು.

Published on
ಮೈಸೂರು: ವಿಜಯನಗರದ ಸದ್ವಿದ್ಯಾ ಸೆಮಿ-ರೆಸಿಡೆನ್ಶಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಮಯಾಂಕ್ ಬಾಕ್ಸಿಂಗ್‌ನಲ್ಲಿ ರಾಷ್ಟ್ರೀಯ ಮಟ್ಟವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಸಿ.ರುಚಿರ್ ಸೈಕ್ಲಿಂಗ್‌ನಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗಾನವಿ ಕುಶಾಲಪ್ಪ ಥ್ರೋಬಾಲ್‌ನಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದಲ್ಲದೆ, ಹಂಪನಾ ಮತ್ತು ಅನುಷಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಜತೆಗೆ ಇವರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಈ ಎಲ್ಲ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಭಿನಂದಿಸಿದೆ ಎಂದು ಪ್ರಕಟಣೆ ತಿಳಿಸಿದೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net