ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರ ಬಸ್ ನಿಲ್ದಾದಲ್ಲಿ ಶುಕ್ರವಾರ ಪಲ್ಸ್ ಪೋಲಿಯೋ ಅಭಿಯಾನ ಅಂಗವಾಗಿ ಜಾಗೃತಿ ಮೂಡಿಸಲಾಯಿತು.
ಪಲ್ಸ್ ಪೋಲಿಯೋ ಅಭಿಯಾನದ ಪೋಸ್ಟರ್‌ಗಳನ್ನು ಪ್ರದರ್ಶಿಸಿ, ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ, 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಎರಡು ಹನಿ ಜೀವ ರಕ್ಷಕ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡಲಾಯಿತು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ.ಲಿಂಗರಾಜು ಮಾತನಾಡಿ, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು. ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ತಲುಪಿಸುವುದೆ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್