ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ ಇಂದು

ಅಂಬೇಡ್ಕರ್
ಅಂಬೇಡ್ಕರ್
Published on
ಹುಣಸೂರು: ತಾಲೂಕಿನ ಹನಗೋಡು ಹೋಬಳಿ ಹಿಂಡುಗುಡ್ಲು ಗ್ರಾಮದಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮವನ್ನು ಜೂ.1ರಂದು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕಿರಂಗೂರು ಸ್ವಾಮಿ ತಿಳಿಸಿದರು.
ಗ್ರಾಮದ ಜೈಭೀಮ್ ಪುತ್ಥಳಿ ಪ್ರತಿಷ್ಠಾನ ಸಮಿತಿ ನೇತೃತ್ವದಲ್ಲಿ ವಿವಿಧ ದಾನಿಗಳ ಸಹಕಾರದಿಂದ ನಿರ್ಮಿಸಿರುವ ಅಂಬೇಡ್ಕರ್ ಪುತ್ಥಳಿಯನ್ನು ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ, ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಬೌದ್ಧವಿಹಾರದ ಗೌತಮಿ ಮಾತಾ ಬಂತೇಜಿ ಕಲ್ಯಾಣಸಿರಿ ಬಂತೇಜಿರ ಸಾನ್ನಿಧ್ಯದಲ್ಲಿ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಶಾಸಕ ಜಿ.ಡಿ.ಹರೀಶ್‌ಗೌಡ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ದರ್ಶನ್ ಧ್ರುವನಾರಾಯಣ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಹರಿಹರ ಆನಂದಸ್ವಾಮಿ, ವಕೀಲ ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೈರಿಗೆ ಗೋವಿಂದರಾಜು ಮಾತನಾಡಿ, 4.5 ಲಕ್ಷ ರೂ.ವೆಚ್ಚದಡಿ 7.5 ಅಡಿ ಎತ್ತರದ ಅಂಬೇಡ್ಕರ್ ಪುತ್ಥಳಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿಕೊಟ್ಟಿದ್ದಾರೆ ಎಂದರು. ಬಸವಯ್ಯ, ರಮೇಶ್, ಬೀರಪ್ಪ, ನಾಗರಾಜ್, ರೇವಣ್ಣ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net