ರೈತರು ದೀನ ದಲಿತರ ಬಗ್ಗೆ ಅಪಾರ ಕಾಳಜಿ ಇರುವ ಸಂಸದ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಜನ್ಮದಿನದ ಅಂಗವಾಗಿ ಪಿರಿಯಾಪಟ್ಟಣ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು. ಎಚ್.ಸಿ.ಬಸವರಾಜ್, ವಿ.ರಾಜೇಂದ್ರ, ಆರ್.ಟಿ.ಸತೀಶ್, ಟಿ.ರಮೇಶ್, ಲೋಕಪಾಲಯ್ಯ ಇತರರು ಇದ್ದಾರೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಜನ್ಮದಿನದ ಅಂಗವಾಗಿ ಪಿರಿಯಾಪಟ್ಟಣ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು. ಎಚ್.ಸಿ.ಬಸವರಾಜ್, ವಿ.ರಾಜೇಂದ್ರ, ಆರ್.ಟಿ.ಸತೀಶ್, ಟಿ.ರಮೇಶ್, ಲೋಕಪಾಲಯ್ಯ ಇತರರು ಇದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ಮುಖಂಡ ಎಚ್.ಸಿ.ಬಸವರಾಜ್ ಅಭಿಪ್ರಾಯ
  • ಯದುವೀರ್ ಒಡೆಯರ್ ಜನ್ಮದಿನದ ಪ್ರಯುಕ್ತ ಸಾರ್ವಜನಿಕ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ
ಪಿರಿಯಾಪಟ್ಟಣ: ಸರಳ ವ್ಯಕ್ತಿತ್ವವನ್ನು ಹೊಂದಿರುವ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಗೆ ಉಜ್ವಲವಾದ ಭವಿಷ್ಯವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಎಚ್.ಸಿ.ಬಸವರಾಜ್ ಅಭಿಪ್ರಾಯ ಪಟ್ಟರು.
ಯದುವೀರ್ ಒಡೆಯರ್ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ತಾಲೂಕು ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿ ಮಾತನಾಡಿದರು.
ರೈತರು, ಕಾರ್ಮಿಕರು, ದೀನ ದಲಿತರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸಂಸದರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.
ರಾಜ ವಂಶಸ್ಥರ ಹಿನ್ನೆಲೆ ಹೊಂದಿದ್ದರೂ ಜನಸಾಮಾನ್ಯರ ನೋವು ನಲಿವುಗಳಿಗೆ ಸದಾ ಸ್ಪಂದಿಸುವ ಗುಣವನ್ನು ಹೊಂದಿರುವ ಯದವೀರ್ ಒಡೆಯರ್ ಅವರಿಗೆ ಮುಂಬರುವ ದಿನಗಳಲ್ಲಿ ಕೇಂದ್ರ ಸಚಿವ ಸ್ಥಾನ ದೊರಕಲಿ ಎಂದು ಆಶಿಸಿದರು.
ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ ಮಾತನಾಡಿ ಸಂಸದರ ಸಾಮಾಜಿಕ ಕಳಕಳಿಯಿಂದಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು ಯುವರಾಜರ ಜನ್ಮದಿನವನ್ನು ಅದ್ದೂರಿ ಆಡಂಬರ ಗಳಿಲ್ಲದೆ ಅತ್ಯಂತ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.
ಬಿಜೆಪಿ ಮುಖಂಡರಾದ ಆರ್.ಟಿ.ಸತೀಶ್, ಟಿ.ರಮೇಶ್, ಲೋಕಪಾಲಯ್ಯ, ರವಿ, ಮೋಹನ್ ಲಾಲ್, ಪ್ರಹ್ಲಾದ್, ನಿತ್ಯಾನಂದ, ಪ್ರಸಾದ್ ಕುಟ್ಟಿ, ರಾಜೇ ಅರಸ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net