ಬೈಟ್ಸ್ ಅಧ್ಯಕ್ಷರಾದ ಪ್ರೊ. ಎಸ್. ಸಡಗೋಪನ್ ಅವರು ಮಾತನಾಡಿ, "ಟಿಸಿಎಸ್ ಟೆಕ್ ಬೈಟ್ಸ್ ಇಂದಿನ ಸ್ಪರ್ಧಾತ್ಮಕ ವಾತಾವರಣದಲ್ಲಿ ಅತ್ಯಗತ್ಯವಾಗಿರುವ ಶ್ರೇಷ್ಠತೆಯ ಸಂಸ್ಕೃತಿಯನ್ನು ಬೆಳೆಸಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನವನ್ನು ಬಲಪಡಿಸುವುದು ಮಾತ್ರವಲ್ಲದೆ, ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಹೊಂದಲು ಪ್ರೋತ್ಸಾಹಿಸುತ್ತದೆ. ವಿವಿಧ ಹಿನ್ನೆಲೆಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಅವರ ಕೌಶಲ್ಯ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಮೂಲಕ, ಈ ಸ್ಪರ್ಧೆಯು ಟೀಮ್ ವರ್ಕ್, ಚೇತರಿಸಿಕೊಳ್ಳುವ ಸಾಮರ್ಥ್ಯ ಮತ್ತು ನ್ಯಾಯಸಮ್ಮತ ಆಟದ ಮೌಲ್ಯಗಳನ್ನು ಅವರಲ್ಲಿ ಬಿತ್ತುತ್ತದೆ. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನವನ್ನು ಹೆಚ್ಚಿಸಲು ಪ್ರೋತ್ಸಾಹಿಸುವ ಈ ಪ್ರಮುಖ ಯೋಜನೆಯ ಆಯೋಜನೆಗೆ ಟಿಸಿಎಸ್ ಜೊತೆ ಕೈಜೋಡಿಸಿರುವುದಕ್ಕೆ ನಮಗೆ ಹೆಮ್ಮೆಯಿದೆ," ಎಂದು ತಿಳಿಸಿದರು.