ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಲಾ ಸಂಭ್ರಮ’ ಕಾರ್ಯಕ್ರಮವನ್ನು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್ ಪಿ ಮಂಜುನಾಥ್ ಉದ್ಘಾಟಿಸಿದರು. ಅಕ್ಷತಾ ಪಾಂಡವಪುರ, ಪ್ರೊ.ಮೊರಬದ ಮಲ್ಲಿಕಾರ್ಜುನ, ಡಾ. ರೇಚಣ್ಣ ಹಾಗೂ ಇತರರು ಇದ್ದರು.
Published on:
Copied
Follow Us
ಮೈಸೂರು: ಯಶಸ್ಸಿನ ಗುರಿ ತಲುಪಲು ಸ್ಪರ್ಧಾ ಮನೋಭಾವ ಮತ್ತು ವೇದಿಕೆ ಅವಶ್ಯಕ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಪ್ರೊ.ಎಸ್ ಪಿ ಮಂಜುನಾಥ್ ಅಭಿಪ್ರಾಯಪಟ್ಟರು.
ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಕಲಾ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ. ಸ್ಪರ್ಧೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಬಹಳ ಮುಖ್ಯ ಎಂದರು.
ನಟಿ ಅಕ್ಷತಾ ಪಾಂಡವಪುರ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯ, ಸಂಗೀತ, ನೃತ್ಯ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ವೇದಿಕೆಗಳನ್ನು ಏರುವುದೇ ನಿಜವಾದ ಗೆಲುವು ಎಂದು ಹೇಳಿದರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ವಿದ್ಯಾರ್ಥಿಗಳು ಸೃಜನಶೀಲ ಬರವಣಿಗೆ ರೂಢಿಸಿಕೊಳ್ಳಬೇಕು ಎಂದರು. ಪ್ರಾಂಶುಪಾಲ ಡಾ. ರೇಚಣ್ಣ, ಸ್ಪರ್ಧೆಯ ಸಂಚಾಲಕ ಹೊನ್ನಶೆಟ್ಟಿ ಇದ್ದರು.