ಕೃತಕಬುದ್ಧಿಮತ್ತೆ ಪ್ರಾಧ್ಯಾಪಕರಿಗೆ ಪರ್ಯಾಯ ಆಗಲು ಸಾಧ್ಯವಿಲ್ಲ : ಕುಲಪತಿ ಪ್ರೊ. ಎನ್.ಕೆ. ಲೋಕನಾಥ್

 ಮೈಸೂರು ನಗರದ ಮಾನಸಗಂಗೋತ್ರಿಯ ರಸಾಯನಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಸರ್ವೋತ್ತಮ ಅಂಬೇಕರ್ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಮೈಸೂರು ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಉದ್ಘಾಟಿಸಿದರು. ಪ್ರೊ.ಎಂ.ಪಿ. ಸದಾಶಿವ, ಪ್ರೊ.ಕೆ. ಮಂಟೆಲಿಂಗು, ಡಾ.ಎ.ಆರ್. ರಮೇಶ, ಡಾ.ಕೆ.ಆರ್. ಪ್ರಭು, ಡಾ.ಪಿ.ಎಂ. ರಾಧಾಕೃಷ್ಣ ಹಾಗೂ ಇತರರು ಇದ್ದರು.
ಮೈಸೂರು ನಗರದ ಮಾನಸಗಂಗೋತ್ರಿಯ ರಸಾಯನಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಸರ್ವೋತ್ತಮ ಅಂಬೇಕರ್ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಮೈಸೂರು ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಉದ್ಘಾಟಿಸಿದರು. ಪ್ರೊ.ಎಂ.ಪಿ. ಸದಾಶಿವ, ಪ್ರೊ.ಕೆ. ಮಂಟೆಲಿಂಗು, ಡಾ.ಎ.ಆರ್. ರಮೇಶ, ಡಾ.ಕೆ.ಆರ್. ಪ್ರಭು, ಡಾ.ಪಿ.ಎಂ. ರಾಧಾಕೃಷ್ಣ ಹಾಗೂ ಇತರರು ಇದ್ದರು.
Published on
ಮೈಸೂರು: ಕೃತಕಬುದ್ಧಿಮತ್ತೆ ಎಂದಿಗೂ ಪ್ರಾಧ್ಯಾಪಕರಿಗೆ ಪರ್ಯಾಯ ಆಗಲು ಸಾಧ್ಯವಿಲ್ಲ, ವಿದ್ಯಾರ್ಥಿಗಳು ಪ್ರಾಧ್ಯಾಪಕರ ಮಾರ್ಗದರ್ಶನದೊ ಂದಿಗೆ ಮುನ್ನಡೆಯಬೇಕು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಕರೆ ನೀಡಿದರು.
ನಗರದ ಮಾನಸಗಂಗೋತ್ರಿಯ ರಸಾಯನಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಸರ್ವೋತ್ತಮ ಅಂಬೇಕರ್ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯಿಂದ ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಎಲ್ಲ ಮಾಹಿತಿ ಕ್ಷಣಮಾತ್ರದಲ್ಲಿ ದೊರೆಯುತ್ತದೆ. ಮಾಹಿತಿ ದೊರೆಯುತ್ತದೆ ಎಂದ ಮಾತ್ರಕ್ಕೆ ಎಲ್ಲ ಜ್ಞಾನ ತಂತ್ರಜ್ಞಾನದ ಮೂಲಕ ದೊರೆಯುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಪ್ರಾಧ್ಯಾಪಕರೊಂದಿಗೆ ಚರ್ಚೆ ಮಾಡಿ ಹೊಸ ಜ್ಞಾನ ಸಂಪಾದಿಸಬೇಕು ಎಂದು ಸಲಹೆ ನೀಡಿದರು.
ಜೀವನದಲ್ಲಿ ಯೋಗ ಹಾಗೂ ಯೋಗ್ಯತೆ ಬಹಳ ಮುಖ್ಯ. ಕಷ್ಟಪಟ್ಟರೆ ಯೋಗ್ಯತೆ ಬರುತ್ತದೆ, ನಂತರ ಸಹಜವಾಗಿಯೇ ಯೋಗ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಗುರಿಯನ್ನು ಹೊಂದುವ ಮೂಲಕ ಆ ಗುರಿ ಸಾಧಿಸಲು ಗುರುಗಳ ಮಾರ್ಗದರ್ಶನದೊಂದಿಗೆ ಮುನ್ನಡೆಯಬೇಕು. ಗುರುಗಳ ಮಾರ್ಗದರ್ಶನ ಹಾಗೂ ಕಠಿಣ ಪರಿಶ್ರಮ ಇದ್ದರೆ ಬದುಕಿನಲ್ಲಿ ಯಶಸ್ಸು ಗಳಿಸಬಹುದು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಲು ವಿಶ್ವವಿದ್ಯಾಲಯ ಬದ್ಧವಾಗಿದೆ. ಆದರೆ, ವಿದ್ಯಾರ್ಥಿಗಳು ಅದಕ್ಕೆ ಪೂರಕವಾಗಿ ತಮ್ಮ ಸಾಧನೆ ತೋರಬೇಕು. ಕೆಲವೊಂದು ಬಾರಿ ಯಾವುದೇ ಸೌಲಭ್ಯ ಇಲ್ಲದೆ ಇದ್ದಾಗಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರುತ್ತಾರೆ. ಸಾಧನೆಗೆ ಎಲ್ಲ ಸೌಲಭ್ಯಗಳು ಇರಬೇಕು ಎಂದೇನು ಇಲ್ಲ. ವಿದ್ಯಾರ್ಥಿಗಳು ಇರುವ ಸೌಲಭ್ಯಗಳನ್ನು ಬಳಸಿಕೊಂಡು ಸಾಧನೆ ತೋರುವ ಕಡೆಗೂ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ರಸಾಯನಶಾಸ್ತ್ರ ವಿಭಾಗ ಅಧ್ಯಕ್ಷ ಪ್ರೊ.ಎಂ.ಪಿ. ಸದಾಶಿವ, ಡೀನ್ ಪ್ರೊ.ಕೆ. ಮಂಟೆಲಿಂಗು, ದತ್ತಿ ಉಪನ್ಯಾಸದ ಸಂಯೋಜಕ ಡಾ.ಎ.ಆರ್. ರಮೇಶ, ಸಂಪನ್ಮೂಲ ವ್ಯಕ್ತಿಗಳಾದ ಡಾ.ಕೆ.ಆರ್. ಪ್ರಭು, ಡಾ.ಪಿ.ಎಂ. ರಾಧಾಕೃಷ್ಣ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net