ತಾಲೂಕು ಆಡಳಿತ, ನಗರ ಪಾಲಿಕೆ ಅಧಿಕಾರಿಗಳು ಜೆಸಿಬಿ, ಬುಲ್ಡೋಜರ್‌ನೊಂದಿಗೆ ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭ ಸ್ಥಳೀಯರು ತಾಲೂಕು ಆಡಳಿತದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗವಿಮಠದವರು ಹಲವು ವರ್ಷಗಳ ಹಿಂದೆ ಹಲವಾರು ಜನರಿಂದ ಹಣ ಪಡೆದು ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಅದರೆ, ಇಂದಿಗೂ ಆರ್‌ಟಿಸಿಯಲ್ಲಿ ಗವಿಮಠದ ಹೆಸರು ಇದೆ. ಗವಿಮಠದ ಹೆಸರು ಇದೆ ಎಂಬ ಒಂದೇ ಕಾರಣಕ್ಕೆ ಮನೆಗಳನ್ನು ನಿರ್ಮಿಸಿ ವಾಸ ಮಾಡುತ್ತಿರುವ ಜನರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ನಮಗೆ ಗವಿಮಠದವರು ನಿವೇಶನ ನೀಡಿರುವ ಕುರಿತು ದಾಖಲೆಗಳು ಇವೆ. ಈ ದಾಖಲೆಗಳನ್ನು ಪರಿಶೀಲಿಸಿ ನಮಗೆ ಹಕ್ಕುಪತ್ರ ನೀಡಿ ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದರು. ಈ ಸಂದರ್ಭ ಸ್ಥಳೀಯ ನಿವಾಸಿಗಳ ಬೆಂಬಲಕ್ಕೆ ಹಲವು ಸಂಘ ಸಂಸ್ಥೆಗಳ ಮುಖಂಡರು ಬಂದರು.