ಮಾದಕ ವಸ್ತು ಬಗ್ಗೆ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸಲಹೆ

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿ.ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ಆಯೋಜಿಸಲಾಗಿತ್ತು.  ಶೇಖ್ ತನ್ವೀರ್ ಆಸಿಫ್, ಮಲ್ಲಿಕ್, ಸುಂದರ್  ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿ.ಲಕ್ಷ್ಮೀಕಾಂತರೆಡ್ಡಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆ ಆಯೋಜಿಸಲಾಗಿತ್ತು. ಶೇಖ್ ತನ್ವೀರ್ ಆಸಿಫ್, ಮಲ್ಲಿಕ್, ಸುಂದರ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Published on
ಮೈಸೂರು:ಮಾದಕ ವಸ್ತುವಿನ ಬಗ್ಗೆ ಮೈಸೂರು ಜಿಲ್ಲೆಗೆ ಅಂಟಿರುವ ಕೆಟ್ಟ ಹೆಸರು ತೊಡೆದು ಹಾಕಲು ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈಸೂರು ಜಿಲ್ಲೆಯು ಡ್ರಗ್ಸ್ ಬಳಕೆ ಮಾಡುವುದರಲ್ಲಿ ಹೆಚ್ಚು ಇದೆ ಎಂದು ಕೆಟ್ಟ ಹೆಸರು ಬರುತ್ತಿದೆ. ಯುವಕ, ಯುವತಿಯರು ಹೆಚ್ಚಾಗಿ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಇದನ್ನು ತಡೆಗಟ್ಟಬೇಕು ಈ ನಿಟ್ಟಿನಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದರು.
ಮಾದಕ ವಸ್ತು ಬಳಕೆ ಮಾಡುವುದು, ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇದರ ಬಳಕೆಯ ಅಪಾಯ ಕುರಿತು ಯುವಜನತೆಯಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು. ನಾರ್ಕೋಟಿಕ್ ರಿಲೇಟೆಡ್ ಆಗಿ ಬಳಸುವ ಔಷಧಗಳ ಮಾರಾಟ ಕುರಿತ ಮಾಹಿತಿಯ ವಹಿಯನ್ನು ಮೆಡಿಕಲ್ ಶಾಪ್‌ಗಳಲ್ಲಿ ಇಡಬೇಕು. ತಪ್ಪಿದಲ್ಲಿ ಮೆಡಿಕಲ್ ಶಾಪ್‌ಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಶಾಲಾ, ಕಾಲೇಜು ಆವರಣದಲ್ಲಿ ಆಗಾಗ್ಗೆ ತಪಾಸಣೆ ನಡೆಸಬೇಕು. ಡ್ರಗ್ಸ್ ಬಳಕೆ ಹಾಗೂ ಮಾರಾಟ ಕಂಡು ಬಂದರೆ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಡಿಸಿಪಿ ಸುಂದರ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net