ಅಂಗವಿಕಲರಿಗೆ ಜಾಗೃತಿ ಮೂಡಿಸುವುದು ಅಗತ್ಯ

ಸರಗೂರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ವಿಕಲಚೇತನರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ವಕೀಲ ಮಣಿರಾಜು ಉದ್ಘಾಟಿಸಿದರು.
ಸರಗೂರು ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ವಿಕಲಚೇತನರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ವಕೀಲ ಮಣಿರಾಜು ಉದ್ಘಾಟಿಸಿದರು.
Published on
ಸರಗೂರು: ಅಂಗವಿಕಲರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ವಕೀಲರ ಸಂಘದ ಸಹ ಕಾರ್ಯದರ್ಶಿ ಮಣಿರಾಜು ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ, ಪಪಂ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ಸರ್ಕಾರಿ ಅಭಿಯೋಜನಾ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ವಿಶೇಷ ವಿಕಲಚೇತನರ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಂಗವಿಕಲರು ಸರ್ಕಾರದ ಉದ್ಯೋಗ ಹಾಗೂ ವಿವಿಧ ಸೌಲಭ್ಯ, ಸ್ಥಳೀಯ ನ್ಯಾಯಾಲಯದ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು. ಸರ್ಕಾರದಿಂದ ಸಿಗುವ ಅನುದಾನಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಇಒ ಪ್ರೇಮ್‌ಕುಮಾರ್ ಮಾತನಾಡಿ, ಅಂಗವಿಕಲರಿಗೆ ನಾಲ್ಕು ರೀತಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಮುಖ್ಯವಾಗಿ ಶಿಕ್ಷಣ ದೊರಕಿಸಿಕೊಡುವ ಕಾರ್ಯಕ್ರಮ, ಯುವಜನರಿಗೆ ಉದ್ಯೋಗಾಧಾರಿತ ಕಾರ್ಯಕ್ರಮ ಹಾಗೂ ಇತರರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಸಲಹೆ ನೀಡಿದರು.
ವಿಕಲಚೇತನರ ಸಂಯೋಜಕ ಜವರಾಜು ಮಾತನಾಡಿ, ಹಲವು ವರ್ಷಗಳಿಂದ ವಿಕಲಚೇತನ ಮಕ್ಕಳಿಗಾಗಿ ಬೇಸಿಗೆ ಶಿಬಿರಗಳನ್ನು ಆಯೋಜಿಸುತ್ತಿದೆ. ಪ್ರತಿ ಬಾರಿಯೂ ಒಂದೊಂದು ವಿಷಯದ ಮೇಲೆ ಶಿಬಿರವನ್ನು ಆಯೋಜಿಸಿದ್ದೇವೆ. ವಿಕಲಚೇತನರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಆರ್ ಕಾರ್ಡ್ ಮಾಡಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಡ್‌ಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರಾದ ಮಹೇಶ್ ಕುಮಾರ್, ಶ್ರೀಕಂಠ ಮೂರ್ತಿ ಮಾತನಾಡಿದರು. ಪಪಂ ಅಧ್ಯಕ್ಷೆ ಚೈತ್ರಾ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ಮುಖ್ಯಾಧಿಕಾರಿ ಸಂತೋಷ ಕುಮಾರ್, ಎಚ್.ಡಿ.ಕೋಟೆ ವೀಲಕಚೇತನರ ಸಂಯೋಜಕ ಎಸ್.ಎಸ್. ಮಹಾದೇವಯ್ಯ, ತಾಲೂಕು ಕಾನೂನು ಸೇವೆ ಸಮಿತಿ ಸಿಬ್ಬಂದಿ ಕವಿತಾ, ಶೃತಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಸ್ವಾಮೇಶ್, ಬಸವರಾಜು, ಮಾದೇವ ಮೂರ್ತಿ, ಕೆಂಡಗಣ್ಣ, ಸಂತೋಷ, ಚಿನ್ನಪ್ಪ ನಾಗರಾಜು, ಕುಮಾರಸ್ವಾಮಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net