ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ

ಸರಗೂರು ತಾಲೂಕಿನ ಸಮೀಪದ ಹೆಬ್ಬಲಗುಪ್ಪೆ ಗ್ರಾಮದ ಕುಟುಂಬದ ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಆಶಾ.
ಸರಗೂರು ತಾಲೂಕಿನ ಸಮೀಪದ ಹೆಬ್ಬಲಗುಪ್ಪೆ ಗ್ರಾಮದ ಕುಟುಂಬದ ಆಂಬುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಆಶಾ.
Published on

ಪ್ರಮುಖ ಮುಖ್ಯಾಂಶಗಳು

  • ತಾಯಿ-ಶಿಶು ಇಬ್ಬರೂ ಸುರಕ್ಷಿತ
  • ಎಚ್.ಡಿ.ಕೋಟೆ ಆಸ್ಪತ್ರೆಗೆ ದಾಖಲು

ಸರಗೂರು:

ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ 108- ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ಮಾರ್ಗಮಧ್ಯೆಯೇ ಹೆರಿಗೆಯಾಗಿದ್ದು, ಗಂಡು ಮಗು ಜನನವಾಗಿದೆ. ಇಬ್ಬರೂ ಸುರಕ್ಷಿತವಾಗಿದ್ದು, ಎಚ್.ಡಿ.ಕೋಟೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಚ್.ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದ ಸೋಮನಾಯಕ ಅವರ ಪತ್ನಿ ಆಶಾ ಅವರನ್ನು ಗುರುವಾರ ಬೆಳಗ್ಗೆ 8.15ರ ವೇಳೆಗೆ ಹೆರಿಗೆಗಾಗಿ ಆಂಬುಲೆನ್ಸ್ ಮೂಲಕ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.
ಮಾರ್ಗಮಧ್ಯೆ ಆಶಾ ಅವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಆಂಬುಲೆನ್ಸ್‌ನ ಇಎಂಟಿ ಮಹೇಶ್ ಹಾಗೂ ಚಾಲಕ ಪ್ರಸನ್ನಕುಮಾರ್ ಅವರು ಸಮಯಪ್ರಜ್ಞೆ ಮೆರೆದಿದ್ದು, ಆಂಬುಲೆನ್ಸ್‌ನಲ್ಲಿಯೇ ಅಗತ್ಯ ವೈದ್ಯಕೀಯ ಶುಶ್ರೂಷೆ ಹಾಗೂ ನೆರವು ಒದಗಿಸಿದ್ದಾರೆ. ಬಳಿಕ ಆಶಾ ಅವರು ಆಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬಳಿಕ ತಾಯಿ ಹಾಗೂ ನವಜಾತ ಶಿಶುವನ್ನು ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net