ಬದನವಾಳು ಸಿದ್ದೇಶ್ವರ ಸ್ವಾಮಿ ರಥೋತ್ಸವ ಅದ್ದೂರಿ

 ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ನಡೆಯಿತು.
Published on
ನಂಜನಗೂಡು : ಶ್ರೀ ಸಿದ್ದೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿ ಸಮಿತಿ ವತಿಯಿಂದ ತಾಲೂಕಿನ ಬದನವಾಳು ಗ್ರಾಮದಲ್ಲಿ ಗುರುವಾರ ಶ್ರೀ ಸಿದ್ದೇಶ್ವಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಗುರುವಾರ ಬೆಳಗ್ಗೆ 5 ಗಂಟೆಯಿಂದ ಸ್ವಾಮಿಗೆ ಬ್ರಾಹ್ಮೀ ಮುಹೂರ್ತದಲ್ಲಿ ಪುಣ್ಯಾಹ, ಮಹಾಗಣಪತಿ ಪೂಜೆ, ಪಂಚ ಕಳಶಾಧನೆ, ಮಹಾಮೃತ್ಯುಂಜಯ ಸಹಿತ ನವಗ್ರಹ ಆಧಾರನೆ ರುದ್ರಾಭಿಷೇಕ, ಬೆಳಗ್ಗೆ 8 ಗಂಟೆಗೆ ಪುರ್ಣಾಹುತಿ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು.
ಬೆಳಗ್ಗೆ 9.15ಕ್ಕೆ ವೃಷಭ ಲಗ್ನದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಸಲಾಯಿತು. ನಂದಿಧ್ವಜ, ಪೂಜಾಕುಣಿತ, ವೀರಗಾಸೆ, ಮಂಗಳವಾಧ್ಯ ರಥೋತ್ಸವಕ್ಕೆ ಮೆರುಗು ನೀಡಿದವು. ಕಳೆದ ರಾತ್ರಿಯಿಂದಲೇ ದೇವಸ್ಥಾನಕ್ಕೆ ಆಗಮಿಸಿರುವ ಭಕ್ತರಿಗೆ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ನಂತರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವವನ್ನು ಕಣ್ತುಂಬಿ ಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಸಣ್ಣೇಗೌಡ, ಕುರಹಟ್ಟಿ ಮಹೇಶ್, ಕೆ. ನಾಗರಾಜು, ಬದನವಾಳು ಸೋಮಣ್ಣ, ಬದನವಾಳು ರಾಮು, ಆಡಳಿತ ಅಧಿಕಾರಿ ವಸಂತ್ ಕುಮಾರ್, ಸಿದ್ದಪ್ಪ, ಮಂಜು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು, ಯಜಮಾನರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net