ನಿಗದಿತ ಸಮಯಕ್ಕೆ ಸಾಲ ಮರುಪಾವತಿಸಿ

ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮದ ಎಂಡಿಸಿಸಿ ಬ್ಯಾಂಕ್ ಶಾಖೆ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿರುವ ನಿವೇಶನವನ್ನು ಬ್ಯಾಂಕ್ ಅಧ್ಯಕ ದೊಡ್ಡ ಸ್ವಾಮಿಗೌಡ ವೀಕ್ಷಿಸಿದರು. ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ವ್ಯವಸ್ಥಾಪಕ ಮೋಹನ್ ರಾಜ್, ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳಾದ ರಮೇಶ್ ಕೆಲ್ಲೂರು  ಚಿಕ್ಕೇಗೌಡ ಕೃಷ್ಣಮೂರ್ತಿ ಹಾಜರಿದ್ದರು.

Published on

ರಾವಂದೂರು: ನಿಗದಿತ ಸಮಯಕ್ಕೆ ಸಾಲ ಮರುಪಾವತಿಸಿದಾಗ ಮಾತ್ರ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮಿಗೌಡ ಹೇಳಿದರು.

ಪಿರಿಯಾಪಟ್ಟಣ ತಾಲೂಕು ರಾವಂದೂರು ಎಂಡಿಸಿಸಿ ಬ್ಯಾಂಕ್ ಶಾಖೆಗೆ ಸೋಮವಾರ ಭೇಟಿ ನೀಡಿದ ಸಂದರ್ಭ
ಈ ವ್ಯಾಪ್ತಿಗೆ ಬರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಾಖಾ ವ್ಯವಸ್ಥಾಪಕರ ಸಮಸ್ಯೆಗಳನ್ನು ಆಲಿಸಿ
ಅವರು ಮಾತನಾಡಿದರು. ಸಹಕಾರ ಸಂಘಗಳ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಹಾಗೂ ಹಲವು ಯೋಜನೆಗಳನ್ನು ರೂಪಿಸಿದೆ. ಇದನ್ನ ರೈತರಿಗೆ ಸಮರ್ಪಕವಾಗಿ ವಿತರಿಸಬೇಕು ಎಂದರು. ರಾವಂದೂರು ಶಾಖೆ ಕಟ್ಟಡ ನಿರ್ಮಾಣಕ್ಕೆ ಮಂಜೂರಾದ ಜಾಗವನ್ನು ವೀಕ್ಷಿಸಿದ ಅವರು, ನಿರ್ಮಾಣ ಕಾಮಗಾರಿಗೆ ಕೇಂದ್ರ ಕಚೇರಿಯಿಂದ ಅನುದಾನ ನೀಡಲಾಗುವುದು. ಸ್ಥಳೀಯ ಶಾಸಕರೊಡನೆ ಚರ್ಚಿಸಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಉದ್ಘಾಟನೆಗೆ ದಿನಾಂಕ ನಿಗದಿ ಪಡಿಸಲಾಗುವುದು ಎಂದು ತಿಳಿಸಿದರು
ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಈಚೂರು ಲೋಕೇಶ್, ವ್ಯವಸ್ಥಾಪಕ ಮೋಹನ್ ರಾಜ್, ವಿವಿಧ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳಾದ ರಮೇಶ್ ಕೆಲ್ಲೂರು ಚಿಕ್ಕೇಗೌಡ ಕೃಷ್ಣಮೂರ್ತಿ, ರಮೇಶ್ ಕಾಂಗ್ರೆಸ್ ಮುಖಂಡರಾದ ಬಾಳೆ ಮಂಡಿ ಕೀರ್ತಿ ಮತ್ತಿತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net