ಬಸವಣ್ಣನ ವಚನಗಳು ಸಮಾಜಕ್ಕೆ ದಾರಿದೀಪ

ತಿ.ನರಸೀಪುರ ತಾಲೂಕಿನ ಧರ್ಮಯ್ಯನಹುಂಡಿ ಗ್ರಾಮದಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ರಾಜಶೇಖರ ಸ್ವಾಮೀಜಿ, ಶಿವಕುಮಾರಸ್ವಾಮಿ, ಪ್ರಭು, ಲಿಂಗರಾಜು, ಸಿದ್ದಲಿಂಗಸ್ವಾಮಿ, ಚಿನ್ನಬುದ್ದಿ ಇತರರು ಇದ್ದರು.
ತಿ.ನರಸೀಪುರ ತಾಲೂಕಿನ ಧರ್ಮಯ್ಯನಹುಂಡಿ ಗ್ರಾಮದಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ರಾಜಶೇಖರ ಸ್ವಾಮೀಜಿ, ಶಿವಕುಮಾರಸ್ವಾಮಿ, ಪ್ರಭು, ಲಿಂಗರಾಜು, ಸಿದ್ದಲಿಂಗಸ್ವಾಮಿ, ಚಿನ್ನಬುದ್ದಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಮತ
  • ಬಸವೇಶ್ವರ ಜಯಂತಿ
ತಿ.ನರಸೀಪುರ: ಸಮಾಜದಲ್ಲಿ ಮಾನವೀಯ, ಸಹನೆ ಮತ್ತು ನೈತಿಕತೆ ಮೌಲ್ಯಗಳು ಉಳಿಯಬೇಕಾದರೆ ಬಸವಣ್ಣ ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ತಾಲೂಕಿನ ಧರ್ಮಯ್ಯನಹುಂಡಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ವಿಶ್ವಗುರು ಬಸವಣ್ಣ ಅವರ ಜಯಂತಿ ಆಚರಣೆಯಲ್ಲ, ಅದು ಮಾನವೀಯ ಮೌಲ್ಯಗಳನ್ನು ನೆನಪಿಸುವ ಮಹೋತ್ಸವವಾಗಿದೆ. ಬಸವಣ್ಣ ಸಮಾಜದಲ್ಲಿ ಸಮಾನತೆ, ಶ್ರಮದ ಗೌರವ, ದಾಸೋಹ ಹಾಗೂ ಸತ್ಯದ ಬದುಕಿನ ಸಂದೇಶವನ್ನು ಸಾರಿದರು. ಅವರ ವಚನಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದರು.
ಧರ್ಮಯ್ಯನಹುಂಡಿ ಗ್ರಾಮದ ಜನರು ಒಗ್ಗಟ್ಟಿನಿಂದ ಬಸವ ಜಯಂತಿಯನ್ನು ಆಚರಿಸುತ್ತಿರುವುದು ಸಂತಸದ ಸಂಗತಿ. ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಗೆ ಸಂಸ್ಕಾರ ಮತ್ತು ಆದರ್ಶಗಳನ್ನು ಪರಿಚಯಿಸುತ್ತವೆ. ಬಸವಣ್ಣ ಅವರ ಕಾಯಕವೇ ಕೈಲಾಸ ಎಂಬ ತತ್ವವನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದುಡಿಮೆ, ಪ್ರಾಮಾಣಿಕತೆ ಮತ್ತು ಪರೋಪಕಾರದಿಂದ ಜೀವನ ಸಾಗಿಸಿದಾಗ ಸಮಾಜದಲ್ಲಿ ಶಾಂತಿ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಬಸವಣ್ಣ ಜಾತಿ-ಮತ ಭೇದವಿಲ್ಲದ ಸಮ ಸಮಾಜದ ಕನಸನ್ನು ಕಂಡವರು. ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ಸಹಕಾರ ಮತ್ತು ಸಹಿಷ್ಣುತೆಯಿಂದ ಬದುಕಬೇಕು ಎಂಬ ಸಂದೇಶವನ್ನು ನೀಡಿದ್ದಾರೆ ಎಂದರು.
ಇದೇ ವೇಳೆ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಶ್ರೀಗಳು ಭೂಮಿ ಪೂಜೆ ನೆರವೇರಿಸಿದರು. ಗ್ರಾಮದ ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಾಗಲಿಂಗು ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ಹೊಸೂರುಂಡಿ ಗುರುಮಲ್ಲೇಶ್ವರ ದಾಸೋಹ ಮಠದ ರಾಜಶೇಖರ ಸ್ವಾಮೀಜಿ, ವಾಟಾಳು ಮಠದ ಶಿವಕುಮಾರಸ್ವಾಮಿ, ಹೆಳವರಹುಂಡಿ ಶ್ರೀಗಳು, ಧರ್ಮಯ್ಯನಹುಂಡಿ ಗೌಡರು, ಶ್ರೀ ಬಸವೇಶ್ವರ ಯುವ ಬಳಗದ ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net