ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ:ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು. ಜಿ.ಲಕ್ಷ್ಮೀಕಾಂತ ರೆಡ್ಡಿ, ಎಸ್.ಯುಕೇಶ್‌ಕುಮಾರ್ ಇತರ ಅಧಿಕಾರಿಗಳು ಇದ್ದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಆಯೋಜಿಸಲಾಗಿತ್ತು. ಜಿ.ಲಕ್ಷ್ಮೀಕಾಂತ ರೆಡ್ಡಿ, ಎಸ್.ಯುಕೇಶ್‌ಕುಮಾರ್ ಇತರ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ ಸಮಸ್ಯೆ ಬಗೆಹರಿಸಿ
  • ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯ ನಿರ್ವಹಣೆಯ ಬಗ್ಗೆ ಪರಿಶೀಲಿಸಿ
ಮೈಸೂರು:ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ. ಈ ಗ್ರಾಮಗಳಿಗೆ ನಿಗದಿತವಾಗಿ ಭೇಟಿ ನೀಡಿ ಕುಡಿಯುವ ನೀರಿನ ಸ್ಥಿತಿಗತಿ ತಿಳಿದುಕೊಂಡು ಅಗತ್ಯ ವ್ಯವಸ್ಥೆ ಮಾಡಿ ಎಂದು ಸಲಹೆ ನೀಡಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯ ನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿ, ಯಾವುದಾದರೂ ತೊಂದರೆ ಇದ್ದಲ್ಲಿ ಸರಿಪಡಿಸಿಕೊಳ್ಳಿ, ಖಾಸಗಿ ಬೋರ್‌ವೆಲ್ಗಳ ಪಟ್ಟಿ ಹಾಗೂ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕಿರುವ ಗ್ರಾಮಗಳನ್ನು ಪಟ್ಟಿ ಮಾಡಿಕೊಂಡು ಯೋಜನೆ ರೂಪಿಸಿಕೊಳ್ಳಿ ಎಂದು ತಿಳಿಸಿದರು.
ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಅಥವಾ ಯಾವುದೇ ತೊಂದರೆ ಇದ್ದಲ್ಲಿ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತನ್ನಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಮೊದಲ ಆದ್ಯತೆ ನೀಡಿ ಪರಿಹರಿಸಬೇಕು ಎಂದರು.
ಸಭೆ ಬಳಿಕ ಸಾರ್ವಜನಿಕರು, ಸ್ಮಶಾನಕ್ಕೆ ಸ್ಥಳ, ಹಕ್ಕು ಪತ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಮಸ್ಯೆಗಳ ಬಗ್ಗೆ ಕುಂದುಕೊರತೆ ಕುರಿತು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್‌ಕುಮಾರ್, ಇತರ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net