ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ

ಮೃತ ಶ್ರೀನಿವಾಸ
ಮೃತ ಶ್ರೀನಿವಾಸ
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಬಿಲಗುಂದ ಗ್ರಾಮದಲ್ಲಿ ಸಾಲಭಾದೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ರೈತ ಶ್ರೀನಿವಾಸ್ (47) ಮೃತರು. ತಮ್ಮ ತಾಯಿ ಹಾಗೂ ತಂದೆಯ ಹೆಸರಿನಲ್ಲಿದ್ದ ಜಮೀನಿನಲ್ಲಿ ಶ್ರೀನಿವಾಸ್ ತಂಬಾಕು ಮತ್ತು ಶುಂಠಿ ಬೆಳೆ ಬೆಳೆಯುತ್ತಿದ್ದರು. ವ್ಯವಸಾಯದ ಉದ್ದೇಶದಿಂದ ಖಾಸಗಿ ಫೈನಾನ್ಸ್ ಹಾಗೂ ಮಹಿಳಾ ಸ್ವಸಹಾಯ ಸಂಘ ಸೇರಿದಂತೆ ಕೈಸಾಲವಾಗಿ ಸುಮಾರು 10 ಲಕ್ಷ ರೂ., ಸಾಲ ಮಾಡಿದ್ದರು. ಕಳೆದ ವರ್ಷದ ಅತಿಯಾದ ಮಳೆಯಿಂದ ಬೆಳೆ ಸರಿಯಾಗಿ ಬಾರದೆ ಕಂಗಾಲಾಗಿದ್ದರು. ಬುಧವಾರ ಬೆಳಗ್ಗೆ ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಒದ್ದಾಡುತ್ತಿದ್ದನ್ನು ಕಂಡ ಸ್ಥಳೀಯರು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಶ್ರೀನಿವಾಸ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತ ರೈತನ ಪತ್ನಿ ಪ್ರತಿಮಾ ನೀಡಿದ ದೂರಿನ ಮೇರೆಗೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net