ಭುವನಹಳ್ಳಿಯಲ್ಲಿ ಎಸ್‌ಡಿಎಂಸಿ ತರಬೇತಿ ಕಾರ್ಯಾಗಾರ

 ಬೆಟ್ಟದಪುರ ಸಮೀಪದ ಭುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಎಸ್‌ಡಿಎಂಸಿ ತರಬೇತಿ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು.
ಬೆಟ್ಟದಪುರ ಸಮೀಪದ ಭುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಎಸ್‌ಡಿಎಂಸಿ ತರಬೇತಿ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಭುವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕ್ಲಸ್ಟರ್ ಮಟ್ಟದ ಎಸ್‌ಡಿಎಂಸಿ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ಕೆ.ಸಿ ಸತೀಶ್ ಮಾತನಾಡಿ, ಎಸ್‌ಡಿಎಂಸಿ ರಚನೆ, ಅಧಿಕಾರ ಮತ್ತು ಕರ್ತವ್ಯಗಳು, ಸರ್ಕಾರದ ಪ್ರೋತ್ಸಾಹದಾಯಕ ಕಾರ್ಯಕ್ರಮಗಳು, ಶಿಕ್ಷಣದ ಸಾರ್ವತ್ರೀಕರಣದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದ ಮಹತ್ವ, ರೂಪುರೇಷೆಗಳು, ಶಿಕ್ಷಕರ ತರಬೇತಿಗಳು, ಅನುಪಾಲನೆ, ಶಿಕ್ಷಣದ ಸಾರ್ವತ್ರೀಕರಣಕ್ಕಾಗಿ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳು, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಸೇರಿದಂತೆ ಶಾಲಾಭಿವೃದ್ಧಿ ಯೋಜನೆ ಶಾಲೆಗಳಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಕುರಿತು ಮಾಹಿತಿ ನೀಡಿದರು.
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುರೇಶ್ ಮಾತನಾಡಿ, ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಣ ಪ್ರೇಮಿಗಳು ಶಾಲಾ ಅಭಿವೃದ್ಧಿಗಾಗಿ ಶ್ರಮಿಸಬೇಕು. ಮಕ್ಕಳು ತಂದೆ-ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಗೌರವ ಕೊಡಬೇಕು ಉತ್ತಮ ಪ್ರಜೆಗಳಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯಶಿಕ್ಷಕಿ ಸರೋಜಮ್ಮ, ಕ್ಲಸ್ಟರ್‌ನ ವಿವಿಧ ಶಾಲೆಯ ಮುಖ್ಯಶಿಕ್ಷಕರಾದ ಚನ್ನೇಗೌಡ, ವಿಜಿ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧುರೇಶ್, ನಿವೃತ್ತ ಮುಖ್ಯಶಿಕ್ಷಕ ನಿಂಗೇಗೌಡ, ಕ್ಲಸ್ಟರ್ ಶಾಲೆಯ ಸಿಬ್ಬಂದಿ ನಂದೀಶ್, ಮೂರ್ತಿ, ಗೀತಾ ಇತರರಿದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net