ಪಕ್ಷದ ಬಲವರ್ಧನೆ ಕಾರ್ಯನಿರ್ವಹಿಸಿ

ತಿ.ನರಸೀಪುರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಲವಾರು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಕುಂಬ್ರಳ್ಳಿ ಸುಬ್ಬಣ್ಣ, ಹಿರಿಯೂರು ಶಿವಕುಮಾರ್, ದಯಾನಂದ್ ಪಟೇಲ್, ಎನ್.ಎಂ.ರಾಮಚಂದ್ರ, ಅನಿಲ್ ಇತರರಿದ್ದರು.
ತಿ.ನರಸೀಪುರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಹಲವಾರು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಕುಂಬ್ರಳ್ಳಿ ಸುಬ್ಬಣ್ಣ, ಹಿರಿಯೂರು ಶಿವಕುಮಾರ್, ದಯಾನಂದ್ ಪಟೇಲ್, ಎನ್.ಎಂ.ರಾಮಚಂದ್ರ, ಅನಿಲ್ ಇತರರಿದ್ದರು.
Published on
ತಿ.ನರಸೀಪುರ : ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಭೆಯಲ್ಲಿ ಹಲವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಅವರ ಸಮ್ಮುಖದಲ್ಲಿ, ಜಿಲ್ಲಾ ಕಾರ್ಯದರ್ಶಿ ದಯಾನಂದ ಪಟೇಲ್ ಅವರ ನೇತೃತ್ವದಲ್ಲಿ ಹಾಗೂ ತಿ.ನರಸೀಪುರ ಮಂಡಲ ಬಿಜೆಪಿ ಅಧ್ಯಕ್ಷ ಸತ್ಯರಾಜ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಬಿ.ಗಿರೀಶ್, ಮನು, ಮಹದೇವ, ಲೋಕೇಶ್ ಹಾಗೂ ವಿಕಾಸ್ ಅವರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ನೂತನವಾಗಿ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಿಜೆಪಿ ಮುಖಂಡರು ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಮಾತನಾಡಿದ ನೂತನ ಸದಸ್ಯರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕಾರ್ಯವೈಖರಿ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರವಾದಿ ಸಿದ್ಧಾಂತಗಳು ಮತ್ತು ಜನಪರ ಕಾರ್ಯಕ್ರಮಗಳಿಂದ ಪ್ರೇರಿತರಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇವೆ ಎಂದು ತಿಳಿಸಿದರು.
ದೇಶದ ಅಭಿವೃದ್ಧಿ ಮತ್ತು ಜನಸೇವೆಯ ಆಶಯದೊಂದಿಗೆ ಪಕ್ಷದ ಸಂಘಟನೆ ಬಲಪಡಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಯದರ್ಶಿ ದಯಾನಂದ ಪಟೇಲ್ ಮಾತನಾಡಿ, ಪಕ್ಷದ ಸಿದ್ಧಾಂತ ಮತ್ತು ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವ ನಿಮಗೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಪಕ್ಷದ ತತ್ವ, ಸಿದ್ಧಾಂತ ಮತ್ತು ಶಿಸ್ತನ್ನು ಪಾಲಿಸಿಕೊಂಡು ಪ್ರಾಮಾಣಿಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಸಂಘಟನೆಯ ಬಲವರ್ಧನೆಗಾಗಿ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.
ವಿಭಾಗ ಪ್ರಭಾರಿಗಳಾದ ಸ್ವಾಮಿ ಮರುಳಾಪುರ, ಸಹ ಪ್ರಭಾರಿ ಈ.ಸಿ.ನಿಂಗರಾಜೇಗೌಡ, ವಿಧಾನಸಭಾ ಕ್ಷೇತ್ರದ ಮುಖಂಡ ಡಾ.ಎಂ.ರೇವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಎನ್.ಎಂ.ರಾಮಚಂದ್ರು, ಮಂಡಲ ಕಾರ್ಯದರ್ಶಿ ಡಾ.ಟಿ.ಎಸ್.ಮಲ್ಲಿಕಾರ್ಜುನ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ತೊಟ್ಟವಾಡಿ ಅನಿಲ್, ಮುಖಂಡರಾದ ಎಂ.ಎಂ.ಜಯಣ್ಣ, ನಳಿನಿಗೌಡ, ಶರತ್ ಪುಟ್ಟಬುದ್ಧಿ, ಎಸ್.ಕೆ.ಕಿರಣ್ ಜಯರಾಮೇಗೌಡ, ಕೆಬ್ಬೇಹುಂಡಿ ಶಿವಕುಮಾರ್, ತಾಲೂಕಿನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net