ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಸಂಘಟನೆ ಮಾಡುವೆ

ಎಚ್.ಡಿ.ಕೋಟೆ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಡಲದ  ನೂತನ ಅಧ್ಯಕ್ಷ ಟಿ. ವೆಂಕಟೇಶ್ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಮಂಡಲ ಅಧ್ಯಕ್ಷ ಶಂಭೇಗೌಡ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪರೀಕ್ಷಿತರಾಜೇ ಅರಸ್, ಮುಖಂಡರಾದ ಬಸವರಾಜು ಮೊತ್ತ, ಮನುಗನಹಳ್ಳಿ ಮಂಜುನಾಥ್, ಭೀಮನಹಳ್ಳಿ ಸೋಮೇಶ್, ಬಿಡುಗಲು ರಾಜು, ವೈ.ಟಿ. ಮಹೇಶ್ ಇತರರು ಇದ್ದರು.

Published on
ಎಚ್.ಡಿ. ಕೋಟೆ : ಪಕ್ಷ ಸಂಘಟನೆಗೆ ಮಹತ್ವ ನೀಡಲಾಗುವುದು ಎಂದು ಬಿಜೆಪಿ ಮಂಡಲ ನೂತನ ಅಧ್ಯಕ್ಷ ಟಿ. ವೆಂಕಟೇಶ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನಾ ಕಾರ್ಯ ನಡೆಸುತ್ತೇನೆ. ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಿ, ಮುಂಬರುವ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು. ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಮಾರ್ಗದರ್ಶನ ಬಹಳ ಮುಖ್ಯ. ಇದರಿಂದ ಸಂಘಟನೆ ಇನ್ನಷ್ಟು ಬಲಿಷ್ಠಗೊಳ್ಳುತ್ತದೆ ಎಂದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪರೀಕ್ಷಿತರಾಜೇ ಅರಸ್ ಮಾತನಾಡಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಶಾಸಕರನ್ನಾಗಿ ಕಳುಹಿಸುವ ಸಂಕಲ್ಪ ಮಾಡಲಾಗಿದೆ. ಕಾರ್ಯಕರ್ತರ ಸಹಕಾರದಿಂದ ಮಾತ್ರ ಇದು ಸಾಧ್ಯವಾಗಲಿದೆ ಎಂದರು.
ನಿಕಟಪೂರ್ವ ಮಂಡಲ ಅಧ್ಯಕ್ಷ ಶಂಭೇಗೌಡ ಮಾತನಾಡಿ, ವೈಯಕ್ತಿಕ ಕೆಲಸಗಳ ಒತ್ತಡದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೂ ಸಂಘಟನೆ ಹಾಗೂ ಪಕ್ಷದ ಬೆಳವಣಿಗೆಗೆ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.
ಬಿಜೆಪಿ ವಕ್ತಾರ ಭೀಮನಹಳ್ಳಿ ಸೋಮೇಶ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ ಪಕ್ಷವನ್ನು ಮೊದಲ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು ಎಂದರು.
ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣ್, ಮುಖಂಡರಾದ ಬಸವರಾಜು ಮೊತ್ತ, ಮನುಗನಹಳ್ಳಿ ಮಂಜುನಾಥ್, ಭೀಮನಹಳ್ಳಿ ಸೋಮೇಶ್, ಬಿಡುಗಲು ರಾಜು, ವೈ.ಟಿ. ಮಹೇಶ್, ಗುರುಸ್ವಾಮಿ, ಲೋಕೇಶ್, ಶೇಖರ್, ಚಂದ್ರಮೌಳೇಶ್ವರ, ಗಿರೀಶ್ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net