ಬಿಜೆಪಿ, ಜೆಡಿಸ್'ನಿಂದ ಬಳ್ಳಾರಿ ಘಟನೆ ರಾಜಕೀಯಕ್ಕೆ ಬಳಕೆ : ಸಿದ್ದರಾಮಯ್ಯ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published on
ಮೈಸೂರು: ಬಳ್ಳಾರಿ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ. ಘಟನೆಯನ್ನು ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದೆ. ತನಿಖಾ ವರದಿ ಬಂದ ನಂತರ ಈ ವಿಚಾರವಾಗಿ ಮಾತನಾಡುತ್ತೇನೆ ಎಂದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೊಂದಿಗೆ ನಡೆದ ಮಾತುಕತೆ ಕುರಿತು ಪ್ರತಿಕ್ರಿಯಿಸಿದ ಅವರು, ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸೌಹಾರ್ದಯುತವಾಗಿ ಮೈಸೂರಿನಲ್ಲಿ ಭೇಟಿ ಮಾಡಲಾಯಿತು. ರಾಜಕಾರಣದ ಕುರಿತು ಚರ್ಚೆ ನಡೆದಿಲ್ಲ ಎಂದರು.
ಈ ಬಾರಿಯ ಬಜೆಟ್ ವಿಶೇಷತೆ ಕುರಿತು ಕೇಳಲಾದ ಪ್ರಶ್ನೆಗೆ ‘ಕಾದು ನೋಡಿ’ ಎಂದು ಉತ್ತರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net