ರಾಮ ಹೆಸರಿನಲ್ಲಿ ಹಣ ಲೂಟಿ ಮಾಡಿದ ಬಿಜೆಪಿ : ಕೆ. ಪುಟ್ಟಸ್ವಾಮಿಗೌಡ ಆಕ್ರೋಶ

 ಮೈಸೂರು ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ವಾರ್ಷಿಕ  ಕಾರ್ಯಕಾರಿಣಿ ಸಭೆಯನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಉದ್ಘಾಟಿಸಿದರು. ವಸಂತ್ ಕುಮಾರ್ ಇಟ್ಟಣ್ಣಗಿ, ಡಾ.ಬಿ.ಜೆ.ವಿಜಯ್ ಕುಮಾರ್, ಪ್ರವೀಣ್ ಸಿದ್ದಲಿಂಗಪುರ, ಹರಿಣಿ ಗೌಡ, ಕಾಮಾಕ್ಷಿ ಗೌಡ ಹಾಗೂ ಇತರರು ಇದ್ದರು.
ಮೈಸೂರು ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ವಾರ್ಷಿಕ ಕಾರ್ಯಕಾರಿಣಿ ಸಭೆಯನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಉದ್ಘಾಟಿಸಿದರು. ವಸಂತ್ ಕುಮಾರ್ ಇಟ್ಟಣ್ಣಗಿ, ಡಾ.ಬಿ.ಜೆ.ವಿಜಯ್ ಕುಮಾರ್, ಪ್ರವೀಣ್ ಸಿದ್ದಲಿಂಗಪುರ, ಹರಿಣಿ ಗೌಡ, ಕಾಮಾಕ್ಷಿ ಗೌಡ ಹಾಗೂ ಇತರರು ಇದ್ದರು.
Published on
ಮೈಸೂರು: ಬಿಜೆಪಿ ದೇಶವನ್ನು ಸಂಪೂರ್ಣ ಹಾಳು ಮಾಡಿರುವುದು ಮಾತ್ರವಲ್ಲದೆ ಇದೀಗ ರಾಮನ ಹೆಸರಲ್ಲಿ ಹಣವನ್ನೂ ಲೂಟಿ ಮಾಡಿದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಟೀಕಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ವಾರ್ಷಿಕ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ ದೇವರ ಬಾಯಿ ಮುಚ್ಚಿಸಿ ಸಾರ್ವಜನಿಕರ ದುಡ್ಡನ್ನು ಲಪಟಾಯಿಸುತ್ತಿದೆ. ಇದನ್ನುಸಾರ್ವಜನಿಕರು ಪ್ರಶ್ನಿಸಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ವಿವಾದದ ಸಂದರ್ಭ ದೇವಾಲಯದ ಬಾಗಿಲು ತೆರೆಸಿ ಪೂಜೆಗೆ ಅವಕಾಶ ನೀಡಿದವರು ಅಂದಿನ ಪ್ರಧಾನಿ ರಾಜೀವ್ ಗಾಂಧಿ. ಆದರೆ, ಬಿಜೆಪಿ ರಾಮನ ಹೆಸರನ್ನು ಹೇಳಿಕೊಂಡು ಅನ್ಯಾಯ ಮಾಡುತ್ತಿದೆ ಎಂದರು.
ಕಾರ್ಮಿಕ ಮುಖಂಡರು ನಾಯಕತ್ವ ಗುಣವನ್ನು ಬೆಳೆಸಿಕೊಂಡಾಗ ಮಾತ್ರ ಬಡ ಕಾರ್ಮಿಕರಿಗೆ ನ್ಯಾಯ ಒದಗಿಸಲು ಸಾಧ್ಯ. ಕಾರ್ಮಿಕರ ಪರವಾಗಿ ಇರುವ ಕಾನೂನುಗಳನ್ನು ತಿಳಿದುಕೊಂಡು ಕಾರ್ಮಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕು. ಇದರ ಜತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಮಿಕರಿಗೆ ತಲುಪುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಕಾರ್ಮಿಕ ಇಲಾಖೆ ಆಯುಕ್ತ ವಸಂತ್ ಕುಮಾರ್ ಇಟ್ಟಣ್ಣಗಿ ಮಾತನಾಡಿ, ದೇಶದಲ್ಲಿ 148 ಕೋಟಿ ಜನಸಂಖ್ಯೆ ಇದ್ದು, ಶೇ.40 ರಷ್ಟು ಜನ ಶ್ರಮಿಕ ವರ್ಗಕ್ಕೆ ಸೇರಿದವರಾಗಿದ್ದಾರೆ. ಅಂದರೆ ಸುಮಾರು 60 ಕೋಟಿ ಜನ ಶ್ರಮಿಕ ವರ್ಗದವರಿದ್ದಾರೆ. ಅದರಲ್ಲಿ ಶೇ.94 ಜನ ಅಸಂಘಟಿತ, ಶೇ.6 ರಷ್ಟು ಮಾತ್ರ ಸಂಘಟಿತ ಕಾರ್ಮಿಕರು ಇದ್ದಾರೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಮಾತನಾಡಿ, ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಆಯಾ ತಾಲೂಕು ಕಾರ್ಮಿಕ ಅಧಿಕಾರಿಗಳನ್ನು ಭೇಟಿಯಾಗಿ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ಮಾಡಬೇಕು. ಬ್ಲಾಕ್ ಅಧ್ಯಕ್ಷರು ಕಟ್ಟುನಿಟ್ಟಾಗಿ ಕೆಲಸ ಮಾಡಲು ಸಾಧ್ಯವಾಗದೆ ಹೋದರೆ ರಾಜೀನಾಮೆ ಕೊಟ್ಟು ಹೊರ ಹೋಗಿ ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪ್ರವೀಣ್ ಸಿದ್ದಲಿಂಗಪುರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರಿಣಿ ಗೌಡ, ಕಾಮಾಕ್ಷಿ ಗೌಡ, ಕಾರ್ಯದರ್ಶಿ ಸಿದ್ದರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೆಡತಲೆ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net