ಧ್ವೇಷ ಭಾಷಣ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಧ್ವೇಷ ಭಾಷಣ ಕಾಯ್ದೆ ಜಾರಿ ವಿರೋಧಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಧ್ವೇಷ ಭಾಷಣ ಕಾಯ್ದೆ ಜಾರಿ ವಿರೋಧಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
Published on
ಮೈಸೂರು: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಧ್ವೇಷ ಭಾಷಣ ಕಾಯ್ದೆ ವಿರೋಧಿಸಿ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದ ಮುಂಭಾಗ ಬಿಜೆಪಿ ಕೃಷ್ಣರಾಜ ಕ್ಷೇತ್ರ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ವಾಕ್ ಸ್ವಾತಂತ್ರೃವನ್ನು ಹತ್ತಿಕ್ಕುವ ಸಲುವಾಗಿ ದ್ವೇಷ ಭಾಷಣ ಕಾಯ್ದೆ ಜಾರಿಗೆ ತರಲು ಪ್ರಯತ್ನ ನಡೆಸುತ್ತಿದೆ. ಇದಕೋಸ್ಕರ ದ್ವೇಷ ಭಾಷಣ ಮಸೂದೆ ಮಂಡಿಸಲಾಗಿದ್ದು, ಈ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.
ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ರೀತಿಂುಲ್ಲಿ ಅತ್ಯಂತ ಕೆಟ್ಟ ಆಡಳಿತವನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಬಹುಮತ ಇದೆ ಎಂಬ ಕಾರಣಕ್ಕೆ ಮಸೂದೆಯನ್ನು ಚರ್ಚೆ ಇಲ್ಲದೆ ಪಾಸ್ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಈ ಮಸೂದೆ ಕಾಯ್ದೆಯಾಗಿ ಜಾರಿಗೆ ಬರಲು ಬಿಡುವುದಿಲ್ಲ ಎಂದರು.
ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ದ್ವೇಷ ಭಾಷಣ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿ ಕತ್ತು ಹಿಸುಕುವ ಕೆಲಸಕ್ಕೆ ಕೈ ಹಾಕಿದೆ. 1975ರಲ್ಲಿ ತುರ್ತು ಪರಿಸ್ಥಿತಿಯನ್ನೇರಿದ ಕಾಂಗ್ರೆಸ್, ಈಗ ಜನರನ್ನು ಜೈಲಿಗೆ ಕಳುಹಿಸುವ ಕೆಲಸಕ್ಕೆ ಕೈ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಎದುರಾಳಿಗಳ ಮೇಲೆ ಹಗೆ ಸಾಧಿಸಲು ದ್ವೇಷ ಮಸೂದೆ ಮಂಡಿಸಿದೆ. ಬಿಜೆಪಿ ನಾಂುಕರನ್ನು ಬಂಧಿಸುವ, ಹೆದರಿಸುವ ಮೂಲಕ ಮುಸಲ್ಮಾನರ ಮತವನ್ನು ಗಟ್ಟಿ ವಾಡಿಕೊಳ್ಳುವ ಹುನ್ನಾರವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ವಾಕ್ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂವಿಧಾನದಲ್ಲಿ ನೀಡಿದ್ದರೂ ಅದನ್ನು ಉಲ್ಲಂಸಲಾಗುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಗೋಪಾಲರಾಜೇ ಅರಸ್, ಜಯರಾಮು, ಜೈ ಕಿರಣ್, ಬಿ.ವಿ.ಮಂಜುನಾಥ್, ಸೌಮ್ಯ ಉಮೇಶ್, ಜೆ.ಎಸ್. ಜಗದೀಶ್ ಗೌಡ, ಎಂ.ಕೆ.ಶಂಕರ್, ಕುರುಬಾರಹಳ್ಳಿ ರಮೇಶ್, ಡಾ.ಎಂ.ಜೆ.ರೂಪಾ, ಜೋಗಿ ಮಂಜು ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net