ಶೇಷಾದ್ರಿಪುರಂ ಕಾಲೇಜಿನಲ್ಲಿ ರಕ್ತದಾನ ಶಿಬಿರ

ನಂಜನಗೂಡು ತಾಲೂಕು ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶೇಷಾದ್ರಿಪುರಂ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ನಂಜನಗೂಡು ತಾಲೂಕು ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶೇಷಾದ್ರಿಪುರಂ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • Blood donation camp
ನಂಜನಗೂಡು: ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶೇಷಾದ್ರಿಪುರಂ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಘಟಕ ಉದ್ಘಾಟನೆ ಹಾಗೂ ಕೆ.ಆರ್. ಆಸ್ಪತ್ರೆ ರಕ್ತನಿಧಿಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯಿಂದ, ಒಟ್ಟು 61 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಜಂಟಿ ಕಾರ್ಯದರ್ಶಿ ಶೇಷನಾರಾಯಣ, ಅಧ್ಯಕ್ಷರಾದ ಬಿ.ಎ. ಅನಂತರಾಮ್, ಜಿಲ್ಲಾ ಯುವ ರೆಡ್ ಕ್ರಾಸ್ ಕಾರ್ಯದರ್ಶಿ ಮಹದೇವಪ್ಪ, ಕೆ.ಆರ್. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮೇರಿ, ಸಂಸ್ಥೆಯ ಪ್ರಾಂಶುಪಾಲರಾದ ಡಾ.ಕೆ. ಪ್ರಹ್ಲಾದ್ ರಾವ್, ಎಸ್‌ಇಟಿ ಸಲಹೆಗಾರರಾದ ಪ್ರೊ. ರಾಜಾರಾವ್, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಎನ್‌ಎಸ್‌ಎಸ್ ಅಧಿಕಾರಿ ಡಾ.ಆರ್. ರಾಘವೇಂದ್ರ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net