ಯುವ ಸಮೂಹದಲ್ಲೇ ಮೂಳೆ ಸಮಸ್ಯೆ ಹೆಚ್ಚು

ಬೆಟ್ಟದಪುರದ ಗ್ರಾಮ ಪಂಚಾಯಿತಿ ಆವರಣದಲ್ಲಿ ಎನ್.ಜೆ ಹಾಸ್ಪಿಟಲ್, ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ಹಾಗೂ ಗ್ರಾ.ಪಂ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ನಡೆಯಿತು.
ಬೆಟ್ಟದಪುರದ ಗ್ರಾಮ ಪಂಚಾಯಿತಿ ಆವರಣದಲ್ಲಿ ಎನ್.ಜೆ ಹಾಸ್ಪಿಟಲ್, ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ಹಾಗೂ ಗ್ರಾ.ಪಂ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ನಡೆಯಿತು.
Published on
ಬೆಟ್ಟದಪುರ: ಜನರಲ್ಲಿ ಅಧಿಕವಾಗಿ ಮೂಳೆ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಸ್ಥಳೀಯವಾಗಿ ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆಯ ಅಧ್ಯಕ್ಷ ಸಂಪತ್ ಕುಮಾರ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಗ್ರಾಮ ಪಂಚಾಯಿತಿ ಆವರಣದಲ್ಲಿ ಎನ್.ಜೆ ಹಾಸ್ಪಿಟಲ್, ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ಹಾಗೂ ಗ್ರಾ.ಪಂ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಮುಖವಾಗಿ ಮಾನವ ದೇಹಕ್ಕೆ ಬಲ ನೀಡುವ ಮೂಳೆಗಳಲ್ಲಿ ಉಂಟಾದ ಸಮಸ್ಯೆಗಳಿಂದ ಬೇರೆಯ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದರಲ್ಲೂ ಯುವ ಸಮೂಹವೂ ಕೂಡ ಮೂಳೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರು ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ವಲಯ 6ರ ವಲಯ ಸೇನಾನಿ ಕೆ.ರಮೇಶ್ ಮಾತನಾಡಿ, ಆಧುನಿಕ ಜೀವನಶೈಲಿಯಿಂದ ಯುವಕರಲ್ಲಿಯೇ ಮೂಳೆ ಮತ್ತು ಬೆನ್ನುನೋವು ಹೆಚ್ಚುತ್ತಿರುವುದು ಆತಂಕಕಾರಿ. ನಿಯಮಿತ ವ್ಯಾಯಾಮ, ಕ್ಯಾಲ್ಸಿಯಂ ಸಮೃದ್ಧ ಆಹಾರ ಹಾಗೂ ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದುಕೊಂಡರೆ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.
ಪಿಡಿಒ ಮಂಜುನಾಥ್ ಮಾತನಾಡಿ, ದಿನನಿತ್ಯದ ಜೀವನದಲ್ಲಿ ಸರಿಯಾಗಿ ಕುಳಿತುಕೊಳ್ಳುವ ವಿಧಾನ, ಭಾರವಾದ ವಸ್ತುಗಳನ್ನು ಎತ್ತುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ, ನಿಯಮಿತ ವ್ಯಾಯಾಮ ಮತ್ತು ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿದೆ ಎಂದು ಹೇಳಿದರು.
110ಕ್ಕೂ ಹೆಚ್ಚು ಜನರು ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ನಿಯೋಜಿತ ಸಹಾಯಕ ಗವರ್ನರ್ ಸಿ.ಎನ್. ವಿಜಯ್ ಕುಮಾರ್, ಕಾರ್ಯದರ್ಶಿ ಸತೀಶ್ ಆರಾಧ್ಯ, ಸದಸ್ಯ ಬಿ.ಎಸ್ ಪ್ರಸನ್ನ ಕುಮಾರ್, ಬಿ.ವಿ. ಅನಿತಾ ತೋಟಪ್ಪಶೆಟ್ಟಿ, ಪ್ರೀತಿ ಅರಸ್, ಡಿ.ರಮೇಶ್, ಡಿ.ಆರ್ ಧನಂಜಯ್, ವೈದ್ಯಾಧಿಕಾರಿ ಡಾ.ರೋಹಿತ್, ಸಿಬ್ಬಂದಿ ಸಂಜಯ್, ದೇವರಾಜು, ಚಂದ್ರು, ಶಿವು, ಹೇಮಾ, ಅರ್ಪಿತಾ, ಗ್ರಾಮ ಪಂಚಾಯಿತಿ ಸಿಬ್ಬಂದಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net