ಮೈಸೂರಿನಲ್ಲಿ ಬಿಎಸ್‌ಎನ್‌ಎಲ್ ಪಿಂಚಣಿದಾರರ ಪ್ರತಿಭಟನೆ

ತುಟ್ಟಿಭತ್ಯೆ ತಡೆಹಿಡಿದಿರುವುದನ್ನು ಖಂಡಿಸಿ ಗುರುವಾರ ಬಿಎಸ್‌ಎನ್‌ಎಲ್ ಪಿಂಚಣಿದಾರ ಜಂಟಿ ವೇದಿಕೆಯಿಂದ ಮೈಸೂರು ನಗರದಲ್ಲಿ ಪ್ರತಿಭಟನೆ ನಡೆಯಿತು.
ತುಟ್ಟಿಭತ್ಯೆ ತಡೆಹಿಡಿದಿರುವುದನ್ನು ಖಂಡಿಸಿ ಗುರುವಾರ ಬಿಎಸ್‌ಎನ್‌ಎಲ್ ಪಿಂಚಣಿದಾರ ಜಂಟಿ ವೇದಿಕೆಯಿಂದ ಮೈಸೂರು ನಗರದಲ್ಲಿ ಪ್ರತಿಭಟನೆ ನಡೆಯಿತು.
Published on
ಮೈಸೂರು: ಕೇಂದ್ರ ಸರ್ಕಾರ ಬಿಎಸ್‌ಎನ್‌ಎಲ್ ಪಿಂಚಣಿದಾರ ತುಟ್ಟಿ ಭತ್ಯೆ ತಡೆ ಹಿಡಿದಿರುವುದನ್ನು ಖಂಡಿಸಿ ಬಿಎಸ್‌ಎನ್‌ಎಲ್ ಪಿಂಚಣಿದಾರ ಜಂಟಿ ವೇದಿಕೆ ವತಿಯಿಂದ ಜಯಲಕ್ಷ್ಮೀಪುರಂನ ಬಿಎಸ್‌ಎನ್‌ಎಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ತುಟ್ಟಿ ಭತ್ಯೆ ತಡೆ ಹಿಡಿದಿರುವ ಕ್ರಮ ಸರಿಯಲ್ಲ, ಇದು ಅರ್ಥಹೀನ ಮತ್ತು ಅಸಂಬದ್ಧ ನಿರ್ಧಾರವಾಗಿದೆ. ಡಿಒಟಿ ಸೇವೆಯಿಂದ ಬಿಎಸ್‌ಎನ್‌ಎಲ್‌ಗೆ ಅಭಿಯುಕ್ತಿಗೊಂಡ ನೌಕರರನ್ನು ನಿವೃತ್ತಿಯ ನಂತರ ಕೇಂದ್ರ ಸರ್ಕಾರದ ಪಿಂಚಣಿದಾರರೆಂದು ಪರಿಗಣಿಸುವುದಾಗಿ ಬಿಎಸ್‌ಎನ್‌ಎಲ್ ಸ್ಥಾಪನೆಯಾದ ವರ್ಷದ(2000) ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನವಾಗಿದೆ. ಅವರ ಪಿಂಚಣಿ ಮತ್ತು ತುಟ್ಟಿ ಭತ್ಯೆಯನ್ನು ನೌಕರರು ಸೇವೆಯಲ್ಲಿದ್ದಾಗ ವಂತಿಗೆ ರೂಪದಲ್ಲಿ ಕೊಟ್ಟಿರುವ ಸಂಚಿತ ನಿಧಿಯಿಂದ ಕೊಡಲ್ಪಡುತ್ತದೆಯೇ ವಿನಃ ಯಾವುದೇ ಕೇಂದ್ರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಯಿಂದ ಪಿಂಚಣಿ ಕೊಡುವುದಿಲ್ಲ. ಹೀಗಾಗಿ ಬಿಎಸ್‌ಎನ್‌ಎಲ್ ಸಂಸ್ಥೆಯ ಲಾಭ-ನಷ್ಟದ ಆಧಾರದ ಮೇಲೆ ಪಿಂಚಣಿದಾರರ ತುಟ್ಟಿ ಭತ್ಯೆ ತಡೆಹಿಡಿಯುವುದು ಅನೈತಿಕ ಮತ್ತು ಅಸಂಬದ್ಧ. ಈ ಕೂಡಲೇ ಬಿಎಸ್‌ಎನ್‌ಎಲ್ ಪಿಂಚಣಿದಾರರಿಗೆ ಜ.1ರಿಂದ ಕೊಡಬೇಕಿರುವ ತುಟ್ಟಿ ಭತ್ಯೆ ನೀಡಬೇಕು ಎಂದು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ವೇದಿಕೆ ಪದಾಧಿಕಾರಿಗಳಾದ ಎಸ್.ವಿಷಕಂಠಮೂರ್ತಿ, ರಾಜಶೇಖರ್, ಬಸವರಾಜು ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net