ಬೆಟ್ಟದಪುರದಲ್ಲಿ ಎಸ್‌ಐಆರ್ ಜಾಗೃತಿ ಅಭಿಯಾನ

ಬೆಟ್ಟದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಸ್‌ಐಆರ್ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಉಪನ್ಯಾಸಕ ಜ್ಯೋತಿಪ್ರಸಾದ್ ಇತರರು ಇದ್ದರು.
ಬೆಟ್ಟದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಸ್‌ಐಆರ್ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಉಪನ್ಯಾಸಕ ಜ್ಯೋತಿಪ್ರಸಾದ್ ಇತರರು ಇದ್ದರು.
Published on
ಬೆಟ್ಟದಪುರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ ) ಜಾಗೃತಿ ಅಭಿಯಾನದ ಅಂಗವಾಗಿ ಬೆಟ್ಟದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು.
ಜಾಗೃತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳು, ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ತಿದ್ದುಪಡಿ ಸೇರಿದಂತೆ ಅಗತ್ಯ ದಾಖಲೆಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಿ ಪರಿಷ್ಕರಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಜಾಥಾ ಸಾರ್ವಜನಿಕರ ಗಮನ ಸೆಳೆದು ಮತದಾನದ ಮಹತ್ವವನ್ನು ಸಾರಿತು.
ಈ ಸಂದರ್ಭ ಮಾತನಾಡಿದ ಉಪನ್ಯಾಸಕ ಜ್ಯೋತಿಪ್ರಸಾದ್, ಮತದಾರರ ಪಟ್ಟಿ ಪರಿಷ್ಕರಣೆಯು ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸುವ ಮಹತ್ವದ ಪ್ರಕ್ರಿಯೆಯಾಗಿದೆ. ಪ್ರತಿಯೊಬ್ಬ ನಾಗರಿಕರೂ ಇದಕ್ಕೆ ಸ್ಪಂದಿಸಬೇಕು. ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿದ್ದರೂ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದರು. 18 ವರ್ಷ ಪೂರ್ಣಗೊಂಡ ಯುವಜನರು ಮತದಾರರಾಗಿ ನೋಂದಾಯಿಸಿಕೊಂಡು ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಮಾತನಾಡಿ, ಸರ್ಕಾರ ನಿಗದಿತ ವೇಳಾಪಟ್ಟಿಯಂತೆ ಪರಿಷ್ಕರಣೆ ಕಾರ್ಯವನ್ನು ಕೈಗೊಂಡಿದೆ. ಸಾರ್ವಜನಿಕರನ್ನು ಜಾಗೃತಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಇಐಸಿ ಸಂಚಾಲಕ ರಾಜು, ಉಪನ್ಯಾಸಕರಾದ ಮೊಹಮ್ಮದ್ ಕಧೀರ್, ಮಣಿಕಂಠ, ಪೂಜಾ, ಸುಮಂತ್, ಸೃಜನ್, ಕಿರಣ್, ಅಭಿಜಿತ್, ಕಾರ್ಯದರ್ಶಿ ಪಾಂಡು, ಮುಖಂಡರಾದ ಅನಿತಾ ತೋಂಟಪ್ಪಶೆಟ್ಟಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net