ಬೆಟ್ಟದಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಸಂದರ್ಭ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಉಪಪ್ರಾಂಶುಪಾಲ ನಟರಾಜು, ಹಿರಿಯ ಶಿಕ್ಷಕ ನಿಂಗರಾಜು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಈ. ಬಿ ವೆಂಕಟೇಶ್, ಮಮತಾ ನಾಯಕ್, ಬಿ.ಎನ್ ಜ್ಯೋತಿ, ರಾಘವೇಂದ್ರ ಶಾಸ್ತ್ರಿ ಇದ್ದರು.
ಬೆಟ್ಟದಪುರ: ಅಧ್ಯಯನದಿಂದ ಬದುಕು ಹಸನಾಗುತ್ತದೆ ಎಂದು ಬೆಟ್ಟದಪುರ ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲ ಬಿ.ಆರ್. ನಟರಾಜು ತಿಳಿಸಿದರು. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ಸೋಮವಾರ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿ ಮಾತನಾಡಿದರು.
ಶಿಕ್ಷಣವು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ. ಜ್ಞಾನಕ್ಕಿಂತ ಮಿಗಿಲಾದುದು ಮತ್ತೊಂದಿಲ್ಲ. ವಿದ್ಯಾರ್ಥಿಗಳು ಸ್ವಇಚ್ಛೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಂಡಾಗ ಬದುಕು ಹಸನಾಗುತ್ತದೆ ಎಂದರು.
ಮಕ್ಕಳು ಕಲಿಕೆಯ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸರ್ವತೋಮುಖ ಪ್ರಗತಿ ಸಾಧಿಸಬೇಕು. ಮಕ್ಕಳು ಉದಾತ್ತ ಮೌಲ್ಯಗಳನ್ನು ರೂಢಿಸಿಕೊಂಡು
ಆದರ್ಶಮಯ ಜೀವನ ನಡೆಸಬೇಕು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಂತೆ ವಿದ್ಯೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಹಿರಿಯ ಶಿಕ್ಷಕ ನಿಂಗರಾಜು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಈ. ಬಿ ವೆಂಕಟೇಶ್, ಸತೀಶ್ ಕುಮಾರ್, ಮೋಹನ್ ಕುಮಾರ್, ಗೊರಳ್ಳಿ ಜಗದೀಶ್, ಆಲನಹಳ್ಳಿ ಕೆಂಪರಾಜು, ಕಟ್ಟೇಪುರ ಮಂಜಣ್ಣ, ಮಮತಾ ನಾಯಕ್, ಬಿ.ಎನ್ ಜ್ಯೋತಿ, ರಾಘವೇಂದ್ರ ಶಾಸ್ತ್ರಿ, ಕಾವ್ಯಶ್ರೀ, ಕಾಂತರಾಜು ಇದ್ದರು.