ಶಿಕ್ಷಣದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ

ಎಚ್.ಡಿ.ಕೋಟೆ ತಾಲೂಕಿನ ನಂಜನಾಯಕನಹಳ್ಳಿ ಕಾಲನಿ ಗ್ರಾಮದ ಸ.ಕಿ.ಪ್ರಾ.ಶಾಲೆ ಆವರಣದಲ್ಲಿ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ರೂಪಾ ಪ್ರಮೋದ್, ವಸಂತಾ, ಲೇಪಾಕ್ಷಿ ಇತರರು ಇದ್ದರು.
ಎಚ್.ಡಿ.ಕೋಟೆ ತಾಲೂಕಿನ ನಂಜನಾಯಕನಹಳ್ಳಿ ಕಾಲನಿ ಗ್ರಾಮದ ಸ.ಕಿ.ಪ್ರಾ.ಶಾಲೆ ಆವರಣದಲ್ಲಿ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ರೂಪಾ ಪ್ರಮೋದ್, ವಸಂತಾ, ಲೇಪಾಕ್ಷಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • education
ಎಚ್.ಡಿ.ಕೋಟೆ: ಶಿಕ್ಷಣದಿಂದ ಮಾತ್ರ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ ಎಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ತಾಲೂಕು ಅಧ್ಯಕ್ಷೆ ರೂಪಾ ಪ್ರಮೋದ್ ತಿಳಿಸಿದರು.
ತಾಲೂಕಿನ ನಂಜನಾಯಕನಹಳ್ಳಿ ಕಾಲನಿ ಗ್ರಾಮದ ಸ.ಕಿ.ಪ್ರಾ.ಶಾಲೆ ಆವರಣದಲ್ಲಿ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಭಾನುವಾರ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶದ ಮಕ್ಕಳ ಜತೆ ಪೈಪೋಟಿ ನೀಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಇಂಗ್ಲಿಷ್ ಭಾಷೆ ಇರಬಹುದು, ಶಿಕ್ಷಕರ ಕೊರತೆ ಆಗಿರಬಹುದು ಅಥವಾ ಗುಣಮಟ್ಟದ ಶಿಕ್ಷಣ ಸಿಗದೆ ಇರುವ ಕಾರಣ ಇರಬಹುದು. ಹಾಗಾಗಿ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಸಾವಿತ್ರಿಬಾಯಿ ಫುಲೆ ಅವರು ಆಧುನಿಕ ಭಾರತದ ಮಹಿಳಾ ಶಿಕ್ಷಣ ಮಾತೆ ಎಂದು ಗುರುತಿಸಲ್ಪಟ್ಟಿದ್ದಾರೆ. ಇಂದು ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಸಮಾನತೆ ಪಡೆಯಲು ಇವರ ಕೊಡುಗೆ ಮುಖ್ಯ ಕಾರಣವಾಗಿದೆ.
ಇಂದಿನ ಯುವತಿಯರಿಗೆ ಸಾವಿತ್ರಿ ಬಾಯಿ ಫುಲೆ ಅವರ ಜೀವನವೇ ಸ್ಪೂರ್ತಿ ಆಗಬೇಕು ಎಂದರು. ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಗಿಡ ನೆಟ್ಟರು. ಸಂಘದ ಕಾರ್ಯದರ್ಶಿ ವಸಂತಾ, ಪದಾಧಿಕಾರಿಗಳಾದ ಲೇಪಾಕ್ಷಿ, ಪ್ರಭಾವತಿ, ವಿಲ್ಮಾ ಷಾ, ಸುಜಾತಾ, ಶಾಲೆಯ ಮುಖ್ಯ ಶಿಕ್ಷಕ ಸಿ.ಡಿ.ರವಿಕುಮಾರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net