ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಬಸ್ ವ್ಯವಸ್ಥೆ

ಕೆ.ಆರ್.ನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಹೊಸ ಬಸ್‌ಗಳ ಸಂಚಾರಕ್ಕೆ ಶಾಸಕ ಡಿ.ರವಿಶಂಕರ್ ಚಾಲನೆ ನೀಡಿದು. ಗಡ್ಡಮಹೇಶ್, ಪ್ರಕಾಶ್, ನಟರಾಜು,  ಕೆಂಚಿಮಂಜು, ವೀರೇಶ್ ತ್ಯಾಪಿ ಇತರರು ಇದ್ದರು.
ಕೆ.ಆರ್.ನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಹೊಸ ಬಸ್‌ಗಳ ಸಂಚಾರಕ್ಕೆ ಶಾಸಕ ಡಿ.ರವಿಶಂಕರ್ ಚಾಲನೆ ನೀಡಿದು. ಗಡ್ಡಮಹೇಶ್, ಪ್ರಕಾಶ್, ನಟರಾಜು, ಕೆಂಚಿಮಂಜು, ವೀರೇಶ್ ತ್ಯಾಪಿ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಿ.ರವಿಶಂಕರ್ ಭರವಸೆ
ಕೆ.ಆರ್.ನಗರ: ಜನರ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇಲ್ಲಿನ ಕೆಎಸ್‌ಆರ್‌ಟಿಸಿ ಘಟಕಕ್ಕೆ 60 ಬಸ್‌ಗಳನ್ನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈಗ 11 ಬಸ್‌ಗಳನ್ನು ನೀಡಿದ್ದು ಮುಂದೆ ಹೆಚ್ಚು ನೀಡುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಶನಿವಾರ ಹೊಸ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬೆಳಗ್ಗೆ ಮತ್ತು ಸಂಜೆ ವೇಳೆ ಹೊಸ ಬಸ್‌ಗಳನ್ನು ನಿಯೋಜಿಸಬೇಕೆಂದು ಮತ್ತು ಕೋವಿಡ್ ಸಂದರ್ಭದಲ್ಲಿ ಸ್ಥಗಿತ ಮಾಡಲಾದ ಮಾರ್ಗಗಳನ್ನು ಮರು ಆರಂಭ ಮಾಡಬೇಕು ಎಂದು ಘಟಕ ವ್ಯವಸ್ಥಾಪಕರಿಗೆ ಸೂಚಿಸಿದರು.
ಬಸ್ ಸ್ಟೇರಿಂಗ್ ತುಂಡಾಗಿ ಚುಂಚನಕಟ್ಟೆ ಬಳಿ ಆಪಘಾತಕ್ಕೀಡಾಗಿತ್ತು. ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವ ದೃಷ್ಟಿಯಿಂದ ಬಸ್‌ಗಳು ಡಿಪೋನಿಂದ ತೆರಳುವ ಮುನ್ನ ಸಂಬಂಧಪಟ್ಟ ಅಧಿಕಾರಿ ಪರಿಶೀಲಿಸಬೇಕೆಂದು ಸೂಚನೆ ನೀಡಿದರು. ಮೈಸೂರಿಗೆ ತೆರಳುವ ಪ್ರಯಾಣಿಕರಿಗೆ ತಂಗುದಾಣ ನಿರ್ಮಾಣ ಮಾಡಲು ಈಗಾಗಲೇ ಭೂಮಿಪೂಜೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ಪುರಸಭೆ ಮಾಜಿ ಅಧ್ಯಕ್ಷ ಕೋಳಿ ಪ್ರಕಾಶ್, ಮಾಜಿ ಸದಸ್ಯ ನಟರಾಜು, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಕೆಂಚಿಮಂಜು, ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ತ್ಯಾಪಿ, ಸಹಾಯ ಸಂಚಾರ ಅಧೀಕ್ಷಕಿ ರಾಜೇಶ್ವರಿ, ಸಂಚಾರ ನಿರೀಕ್ಷಕ ಎಂ.ಸುರೇಶ್, ಕಾಂಗ್ರೆಸ್ ಮುಖಂಡರಾದ ಗಣಪತಿ ರವಿ, ಕೆ.ವಿನಯ್, ಬಿ.ಎಂ.ಗಿರೀಶ್, ಶಂಕರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net