ಶಿಷ್ಟಾಚಾರ ಪಾಲನೆಯೊಂದಿಗೆ ಗಣರಾಜ್ಯೋತ್ಸವ ಆಚರಿಸಿ

ಹನೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಕೆ.ಎನ್‌ಚೈತ್ರಾ, ಉಮೇಶ್, ಮಹೇಶ್, ಮಹೇಶ್‌ಕುಮಾರ್ ಇತರರಿದ್ದರು.
ಹನೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಅಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಕೆ.ಎನ್‌ಚೈತ್ರಾ, ಉಮೇಶ್, ಮಹೇಶ್, ಮಹೇಶ್‌ಕುಮಾರ್ ಇತರರಿದ್ದರು.
Published on

ಅಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸೂಚನೆ

ಹನೂರು: ವಿವಿಧ ಇಲಾಖೆಯ ಅಕಾರಿಗಳು ಕಡ್ಡಾಯವಾಗಿ ಭಾಗಿಯಾಗುವುದರ ಮೂಲಕ ಶಿಷ್ಟಾಚಾರದ ಪಾಲನೆಯೊಂದಿಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಬುಧವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ಧ ವಿವಿಧ ಇಲಾಖೆಯ ಅಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಹನೂರಿನಲ್ಲಿ ನಡೆಯುವ ರಾಷ್ಟ್ರೀಯ ಹಬ್ಬಗಳ ಆಚರಣೆಗಳಲ್ಲಿ ಶಿಸ್ತಿನ ಕೊರತೆ ಕಾಣುತ್ತಿದ್ದು, ಅಬಾಸವಾಗುತ್ತಿದೆ. ಇದರಿಂದ ಕಾರ್ಯಕ್ರಮದ ಆಶಯ ಸಲತೆ ಸಾಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾರ್ಯಕ್ರಮದಲ್ಲಿ ಶಿಸ್ತು ಬದ್ಧತೆ ಹಾಗೂ ಹೊಸತನ ಅಗತ್ಯವಾಗಿದೆ. ಜತೆಗೆ ಶಿಷ್ಟಾಚಾರವನ್ನು ಕಾಯ್ದುಕೊಳ್ಳಬೇಕಿದೆ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ನೀಡಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸಬೇಕು. ಮುಖ್ಯವಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಭಾಗವಹಿಸುವುದರ ಮೂಲಕ ಗಣರಾಜ್ಯೋತ್ಸ ಕಾರ್ಯಕ್ರಮಕ್ಕೆ ಮೆರಗು ನೀಡಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ಸೂಚಿಸಿದರು.
ಇದೇ ವೇಳೆ ವಿದ್ಯುತ್ ದೀಪಾಲಂಕಾರ, ಮಕ್ಕಳ ಭಾಗವಹಿಸುವಿಕೆ, ಸಾಂಸ್ಕೃತಿಕ ಕಾರ್ಯಕ್ರಮ, ಅಗತ್ಯ ಮೂಲಸೌಕರ್ಯ ಸೇರಿದಂತೆ ಯಶಸ್ವಿ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ಅಕಾರಿಗಳಿಂದ ಅಗತ್ಯ ಸಲಹೆ ಪಡೆಯಲಾಯಿತು. ವಿವಿಧ ಇಲಾಖೆಯ ಅಕಾರಿಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು.
ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್, ಬಿಇಒ ಮಹೇಶ್, ಪಪಂ ಮುಖ್ಯಾಕಾರಿ ಮಹೇಶ್‌ಕುಮಾರ್, ತಾಲೂಕು ಆರೋಗ್ಯಾಕಾರಿ ಡಾ. ಪ್ರಕಾಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸಿದ್ದರಾಜು, ಸಿಡಿಪಿಒ ಅಂಬಿಕಾ, ಕೃಷಿ ಅಕಾರಿ ನಾಗೇಂದ್ರ, ಸಬ್ ಇನ್‌ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಅಗ್ನಿಶಾಮಕ ಠಾಣಾಕಾರಿ ಮಹೇಶ್, ಉಪ ನೋಂದಣಾಕಾರಿ ಉಷಾ, ಸೆಸ್ಕ್ ಎಇಇ ರಂಗಸ್ವಾಮಿ, ನೀರಾವರಿ ಇಲಾಖೆಯ ಎಇಇ ಕರುಣಾಮಯಿ, ಪಿಡಬ್ಲ್ಯುಡಿ ಎಇಇ ಪುರೋಷತ್ತಮ್ ಹಾಗೂ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net