ಸೌಹಾರ್ದಯುತವಾಗಿ ಹಬ್ಬ ಆಚರಿಸಿ

ರಂಜಾನ್ ಆಚರಣೆ ಹಿನ್ನೆಲೆ ಸರಗೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಪಿಎಸ್‌ಐ ಆರ್.ಕಿರಣ್, ಅಲ್ಪಸಂಖ್ಯಾತ ಮುಖಂಡರು ಇದ್ದರು.
ರಂಜಾನ್ ಆಚರಣೆ ಹಿನ್ನೆಲೆ ಸರಗೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಪಿಎಸ್‌ಐ ಆರ್.ಕಿರಣ್, ಅಲ್ಪಸಂಖ್ಯಾತ ಮುಖಂಡರು ಇದ್ದರು.
Published on
ಸರಗೂರು: ಹಬ್ಬಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು ಎಂದು ಸರಗೂರು ಪೋಲಿಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್ ಆರ್.ಕಿರಣ್ ತಿಳಿಸಿದರು.
ರಂಜಾನ್ ಆಚರಣೆ ಪ್ರಯುಕ್ತ ಪಟ್ಟಣದ ಠಾಣೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.
ಕಾನೂನು ಸುವ್ಯವಸ್ಥೆ ಕದಲುವಂತಹ ಕೃತ್ಯ ಎಸಗಿದವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಆದರೆ ಇತ್ತೀಚೆಗೆ ಅಪರಾಧಿಗಳ ಪರವಾಗಿ ಸಮುದಾಯ, ಸಂಘಟನೆಗಳು ಸಹಕಾರಕ್ಕೆ ಬರುತ್ತಿರುವುದು ಸರಿಯಲ್ಲ. ಎಲ್ಲ ಸಮುದಾಯದ ಜನರು ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು. ಯಾವುದೇ ರೀತಿಯ ಗಲಾಟೆ, ಜನರಿಗೆ ತೊಂದರೆಯಾಗದ ರೀತಿಯಲ್ಲಿ ಮುಖಂಡರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮಾತನಾಡಿ, ರಂಜಾನ್ ವೇಳೆ ನಾನಾ ಮಸೀದಿಗಳ ಪಕ್ಕದಲ್ಲಿ ಟ್ರಾಫಿಕ್, ವಾಹನಗಳ ಸಂಚಾರ ನಿಯಂತ್ರಣ ಮಾಡಬೇಕು. ಹಬ್ಬದ ಪ್ರಯುಕ್ತ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿರುತ್ತದೆ. ಆ ವೇಳೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಪಿಎಸ್‌ಐ ಆರ್. ಕಿರಣ್, ರಂಜಾನ್ ಪ್ರಯುಕ್ತ ಮಸೀದಿ ಮತ್ತು ನಾನಾ ವೃತ್ತಗಳಲ್ಲಿ ಹೆಚ್ಚುವರಿಯಾಗಿ ಹೋಂ ಗಾರ್ಡನ್ನು ನೇಮಕ ಮಾಡಲಾಗುವುದು. ಯಾವುದೇ ರೀತಿಯ ಘರ್ಷಣೆಯಾಗದ ರೀತಿಯಲ್ಲಿ ಎಚ್ಚರ ವಹಿಸಲಾಗುವುದು. ಅದಕ್ಕೆ ಸೂಕ್ತ ಸಿಬ್ಬಂದಿ ನೇಮಕ ಮಾಡಲಾಗುವುದು ಎಂದರು.
ಸಿಬ್ಬಂದಿ ಇಮ್ರಾನ್ ಅಹಮದ್ ,ಚಂದ್ರು, ಶಿವರಾಜು, ಮುಖಂಡರು ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net