ಭಾರತೀಯ ಸಂಸ್ಕೃತಿಗೆ ಕೊಡುಗೆ ನೀಡಿದ ಮಹಾನ್ ಋಷಿ

* ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಭಿಪ್ರಾಯ * ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
Celebrating Apollo BGS Hospitals, Mysore, for winning Best Stroke Care Campaign by a Hospital at the Stroke Innovations & Excellence Awards 2024! Empowering stroke care through impactful campaigns.
ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರೊ.ಎನ್.ಕೆ.ಲೋಕನಾಥ್, ಪ್ರೊ.ಬಿ.ಸುಕನ್ಯಾ ಮಾರುತಿ, ಸೌಮ್ಯಾ,ಪ್ರೊ.ಎಸ್.ಜೆ.ಮಂಜುನಾಥ್, ಪ್ರೊ. ಬಿ.ಕೆ.ಕೆಂಪೇಗೌಡ ಇದ್ದರು.
Published on: 

ಮಹರ್ಷಿ ವಾಲ್ಮೀಕಿ ಅವರು ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಮಹಾನ್ ಋಷಿಯಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ಮಾನವೀಯ ಮೌಲ್ಯ, ಧರ್ಮ, ಸತ್ಯ, ನ್ಯಾಯ ಹಾಗೂ ಕರ್ತವ್ಯ ಪ್ರಜ್ಞೆಯ ಮಹತ್ವವನ್ನು ಸಾರಿದ್ದಾರೆ. ಅವರ ಸಾಹಿತ್ಯಿಕ ಕೊಡುಗೆ ಭಾರತೀಯ ಸಮಾಜದ ಮೇಲೆ ಶಾಶ್ವತವಾದ ಪ್ರಭಾವ ಬೀರಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಅವರ ಜೀವನ ಸಾಧನೆ, ಸಾಹಿತ್ಯಿಕ ಕೊಡುಗೆ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಹರ್ಷಿ ವಾಲ್ಮೀಕಿ ಅವರು ಕೇವಲ ಒಬ್ಬ ಕವಿಯಲ್ಲ, ಅವರು ಜ್ಞಾನ, ಪರಿವರ್ತನೆ, ಮಾನವೀಯತೆ ಮತ್ತು ನೈತಿಕ ಮೌಲ್ಯಗಳ ಪ್ರತೀಕವಾಗಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ಭಾರತೀಯ ಸಾಹಿತ್ಯ ಮತ್ತು ಸಂಸ್ಕೃತಿಯ ಇತಿಹಾಸದಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದ್ದಾರೆ. ಅವರನ್ನು ಸಂಸ್ಕೃತ ಸಾಹಿತ್ಯದ ಆದಿಕವಿ ಎಂದು ಗೌರವಿಸಲಾಗುತ್ತದೆ ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಂದೇಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂಬುದು ಜಯಂತಿ ಆಚರಣೆಯ ಪ್ರಮುಖ ಆಶಯವಾಗಿದೆ ಎಂದರು.

ಸಾಹಿತಿ ಪ್ರೊ.ಬಿ.ಸುಕನ್ಯಾ ಮಾರುತಿ ವಿಶೇಷ ಉಪನ್ಯಾಸ ನೀಡಿದರು. ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಪತ್ನಿ ಸೌಮ್ಯಾ, ಕುಲಸಚಿವರಾದ ಪ್ರೊ.ಎಸ್.ಜೆ.ಮಂಜುನಾಥ್, ಪ್ರೊ. ಬಿ.ಕೆ.ಕೆಂಪೇಗೌಡ, ವಿವಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಸಹಾಯಕ ಕುಲಸಚಿವೆ ಕಮಲಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net