ಬಡ ಜನರ ಅನ್ನ ಕಸಿಯುವ ಕೇಂದ್ರ ಸರ್ಕಾರ: ರವಿ ಮಂಚೇಗೌಡನ ಕೊಪ್ಪಲು

ರವಿ ಮಂಚೇಗೌಡನ ಕೊಪ್ಪಲು
ರವಿ ಮಂಚೇಗೌಡನ ಕೊಪ್ಪಲು
Published on

ಪ್ರಮುಖ ಮುಖ್ಯಾಂಶಗಳು

  • ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಆರೋಪ
  • ಮನರೇಗಾ ಹೆಸರು ಬದಲಾವಣೆಗೆ ಆಕ್ಷೇಪ
ಮೈಸೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹೆಸರು ಮತ್ತು ಸ್ವರೂಪ ಬದಲಿಸುವ ಮೂಲಕ ಬಡ ಜನರ ಅನ್ನ ಕಸಿದು ಕೊಳ್ಳಲು ಹೊರಟಿದೆ ಎಂದು ಇಂದಿರಾ ಗಾಂಧಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರು ಬದಲಿಸುವ ಮೂಲಕ ಮಹಾತ್ಮ ಗಾಂಧಿ ಬಗೆಗಿನ ತನ್ನ ದ್ವೇಷವನ್ನು ಮತ್ತು ಯೋಜನೆಯ ಸ್ವರೂಪ ಬದಲಿಸುವ ಮೂಲಕ ಒಕ್ಕೂಟ ವ್ಯವಸ್ಥೆಯ ಬಗೆಗಿನ ತನ್ನ ವಿರೋಧವನ್ನು ಬಯಲು ಮಾಡಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅನೇಕ ಅಧ್ಯಯನ ನಡೆಸಿ ಯೋಜನೆಯನ್ನು ಯುಪಿಎ ಸರ್ಕಾರ ಸಂವಿಧಾನಬದ್ಧವಾಗಿ ಜಾರಿಗೆ ತಂದಿತ್ತು. ಉದ್ಯೋಗ ಖಾತ್ರಿಯನ್ನು ಸಾಂವಿಧಾನಿಕ ಹಕ್ಕಾಗಿ ನೀಡಿತ್ತು. ಮಹಾತ್ಮಾ ಗಾಂಧಿ ಅವರ ಹೆಸರು ಬದಲಾವಣೆ ಮಾಡುತ್ತಿರುವುದು ನೋಡಿದರೆ ಕೇಂದ್ರ ಸರ್ಕಾರದ ಅಂತಿಮ ದಿನಗಳ ಆರಂಭ ಎನ್ನಬಹುದು. ಕೇಂದ್ರ ಸರ್ಕಾರ ಹೆಸರು ಬದಲಾವಣೆ ಮಾಡುವ ಮೂಲಕ ದ್ವೇಷ ರಾಜಕಾರಣ ಮಾಡಿದೆ. ತಮಗೆ ಬೇಕಾದ ರೀತಿಯಲ್ಲಿ ಯೋಜನೆಯನ್ನು ಬದಲಾವಣೆ ಮಾಡಿ ಭಾರತದ ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಟೀಕಿಸಿದ್ದಾರೆ.
ಪದೇ ಪದೆ ಯುಪಿಎ ಸರ್ಕಾರದ ಜನಪರ ಕೆಲಸಗಳು ಮತ್ತು ಯೋಜನೆಗಳನ್ನು ಬಂದ್ ಮಾಡುವ ಹುನ್ನಾರ ನಡೆದಿದೆ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲೂ ವಿನಾಕಾರಣ ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net