ಶ್ರೀ ಚಾಮುಂಡೇಶ್ವರಿ ದೇವಿಯ ವಧರ್ಂತಿ ಮಹೋತ್ಸವ ಹಿನ್ನಲೆ ಚಪ್ಪರದಹಳ್ಳಿಯಲ್ಲಿ ನಾಡದೇವತೆಯ ವಿಶೇಷ ಪೂಜೆ, ಮೆರವಣಿಗೆ ನಡೆಯಿತು.
Published on:
Copied
Follow Us
ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಶ್ರೀ ಚಾಮುಂಡೇಶ್ವರಿ ದೇಗುಲದಲ್ಲಿ ಮಂಗಳವಾರ ನಾಡ ದೇವತೆಯ ವಧರ್ಂತಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿ ಭಾವದಿಂದ ಜರುಗಿದವು.
ಬೆಳಗ್ಗೆ ದೇವಿಯ ಉತ್ಸವ ಮೂರ್ತಿಯನ್ನು ಶುಚಿಗೊಳಿಸಿ ವಿಶೇಷವಾಗಿ ಅಲಂಕರಿಸಲಾಯಿತು. ನಂತರ ಅರ್ಚಕರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ವಾದ್ಯಗೋಷ್ಠಿಯೊಂದಿಗೆ ಆರಂಭವಾದ ಪೂಜಾ ಕಾರ್ಯಕ್ರಮದ ಬಳಿಕ ದೇವಿಯ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥಗಳು ನೆರವೇರಲೆಂದು ಪ್ರಾರ್ಥಿಸಿದರು. ಮಹೋತ್ಸವದ ಹಿನ್ನೆಲೆಯಲ್ಲಿ ದೇಗುಲದಲ್ಲಿ ಭಕ್ತಿಮಯ ವಾತಾವರಣ ನಿರ್ಮಾಣವಾಗಿತ್ತು.