ಹನಗೋಡು ಹೋಬಳಿಯ ದೊಡ್ಡಹೆಜ್ಜೂರು ಗ್ರಾಮದ ಸುದರ್ಶನ್-ನವ್ಯಾ ದಂಪತಿ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು. ಶನಿವಾರದಂದು ತನ್ನ ಅಣ್ಣನೊಂದಿಗೆ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಮನೆಯ ಬಾಗಿಲಿನ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳ ತುಂಡನ್ನು ತನ್ನ ಬಾಯಿಗೆ ಹಾಕಿಕೊಂಡಿದ್ದಾನೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಮಗು ಒಣಗಿದ ಹೂವನ್ನು ನುಂಗಿದ್ದರಿಂದ ಉಸಿರಾಟದ ತೊಂದರೆಯಿಂದ ಅಸ್ವಸ್ಥಗೊಂಡಿತ್ತು. ಅಸ್ವಸ್ಥಗೊಂಡ ಮಗುವಿಗೆ ಪಾಲಕರು ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.