ಗ್ರಾಮ ಮಟ್ಟದಿಂದಲೇ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ:ಎಡಿಸಿ ಆರ್.ಐಶ್ವರ್ಯ

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಕಾರ್ಯಪಡೆ ಸಮಿತಿ ಸಭೆಯಲ್ಲಿ ಎಡಿಸಿ ಐಶ್ವರ್ಯಾ, ಲಲಿತಾ ಬಾಯಿ, ಚೇತನ್, ರವಿಚಂದ್ರ, ಎಸ್.ಎಚ್.ನಿರ್ಮಲಾ ಇತರರು ಇದ್ದರು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಕಾರ್ಯಪಡೆ ಸಮಿತಿ ಸಭೆಯಲ್ಲಿ ಎಡಿಸಿ ಐಶ್ವರ್ಯಾ, ಲಲಿತಾ ಬಾಯಿ, ಚೇತನ್, ರವಿಚಂದ್ರ, ಎಸ್.ಎಚ್.ನಿರ್ಮಲಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಬೇಕು
  • ಅಧಿಕಾರಿಗಳು ಪ್ರತಿ ತಿಂಗಳೂ ನಿಗದಿಪಡಿಸಿರುವ ಕನಿಷ್ಠ 15 ತಪಾಸಣೆ ಅಥವಾ ದಾಳಿಗಳನ್ನು ನಡೆಸಿ ವರದಿ ನೀಡಬೇಕು
ಮೈಸೂರು:ಗ್ರಾಮ ಮಟ್ಟದಿಂದಲೇ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಹಾಗೂ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಅಧಿಕಾರಿಗಳು ಪ್ರತಿ ತಿಂಗಳೂ ನಿಗದಿಪಡಿಸಿರುವ ಕನಿಷ್ಠ 15 ತಪಾಸಣೆ ಅಥವಾ ದಾಳಿಗಳನ್ನು ನಡೆಸಿ ವರದಿ ನೀಡಬೇಕು ಎಂದು ಸೂಚಿಸಿದರು.
ದಾಳಿ ಅಥವಾ ತಪಾಸಣೆ ವೇಳೆ ಪತ್ತೆಯಾಗುವ ಬಾಲ ಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರು ಪಡಿಸಿದ ನಂತರ ಅವರ ಅರ್ಹತೆಯ ಅನುಗುಣವಾಗಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಥವಾ ಸರ್ಕಾರಿ ಸ್ವಾಮ್ಯದಲ್ಲಿರುವ ವಸತಿಶಾಲೆಗಳಿಗೆ ದಾಖಲಿಸಿ ಶಿಕ್ಷಣ ಕೊಡಿಸಬೇಕು. ರಕ್ಷಿಸಲ್ಪಟ್ಟ ಮಕ್ಕಳಿಗೆ ರಕ್ಷಣೆಯೊಂದಿಗೆ ಪುನರ್ವಸತಿಯನ್ನೂ ನೀಡುವುದು ಸಹ ಅತಿಮುಖ್ಯ ಎಂದರು.
ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿ, ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ 434 ದಾಳಿಗಳನ್ನು ನಡೆಸಿ 14 ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. 12 ಜನ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. 20 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ವಿವರಿಸಿದರು.
ಸಹಾಯಕ ಕಾರ್ಮಿಕ ಆಯುಕ್ತೆ ಲಲಿತಾ ಬಾಯಿ, ಕಾರ್ಮಿಕ ಅಧಿಕಾರಿ ಚೇತನ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರವಿಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net