ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು : ಸಚಿವ ಡಾ.ಎಚ್.ಸಿ. ಮಹದೇವಪ್ಪ

 ಹೂಟಗಳ್ಳಿಯ ಕೆಎಚ್‌ಬಿ ಕಾಲೋನಿಯ ಸುದರ್ಶನ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಿದರು. ಡಾ.ಎನ್. ಶ್ರೀನಿವಾಸನ್, ಸುರೇಶ್, ನೇಹಾ ಪ್ರಕಾಶ್ ಹಾಗೂ ಇತರರು ಇದ್ದರು.
ಹೂಟಗಳ್ಳಿಯ ಕೆಎಚ್‌ಬಿ ಕಾಲೋನಿಯ ಸುದರ್ಶನ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಿದರು. ಡಾ.ಎನ್. ಶ್ರೀನಿವಾಸನ್, ಸುರೇಶ್, ನೇಹಾ ಪ್ರಕಾಶ್ ಹಾಗೂ ಇತರರು ಇದ್ದರು.
Published on
ಮೈಸೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಉನ್ನತ ಸ್ಥಾನಕ್ಕೇರುವಂತೆ ಶಿಕ್ಷಕರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕರೆ ನೀಡಿದರು.
ಹೂಟಗಳ್ಳಿಯ ಕೆಎಚ್‌ಬಿ ಕಾಲೋನಿಯ ಸುದರ್ಶನ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಸಂಸ್ಥೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ, ಸಮವಸ್ತ್ರ ಹಾಗೂ ಶೈಕ್ಷಣಿಕ ಸಾಮಾಗ್ರಿಗಳನ್ನು ನೀಡಿ ಯಾವುದೇ ಜಾತಿ, ಧರ್ಮ ಬೇಧ, ತಾರತಮ್ಯವಿಲ್ಲದೆ ಎಲ್ಲ ವರ್ಗದ ಮಕ್ಕಳನ್ನು ಸಮಾನವಾಗಿ ಕಾಣುವ ಮೂಲಕ ಉನ್ನತ ಶಿಕ್ಷಣ ನೀಡುತ್ತಿರುವುದು ಎಲ್ಲರು ಮೆಚ್ಚುವಂತದ್ದು ಎಂದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಆಶಯದಂತೆ ಶಿಕ್ಷಣದಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬಿತ್ತುವ ಮುಖೇನ ಮೂಢನಂಬಿಕೆ ಯಿಂದ ದೂರವಿರುವ ಬಗ್ಗೆ ಅರಿವು ಮೂಡಿಸಬೇಕು. ಶಿಕ್ಷಣ ಮಾತ್ರವೇ ಕತ್ತಲಿನಿಂದ ಬೆಳಕಿನಡೆಗೆ ಇರುವ ಮಾರ್ಗ.ಅಂತೆಯೇ ಗುಣಮಟ್ಟದ ಶಿಕ್ಷಣ ಕಲ್ಪಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥ ಡಾ.ಎನ್. ಶ್ರೀನಿವಾಸನ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
ಶಿಕ್ಷಕರು ಮಕ್ಕಳಿಗೆ ನಾವು ಭಾರತೀಯರು, ನಾವೆಲ್ಲ ಒಂದೇ ಎಂಬ ಭಾವನೆ ಮೂಡಿಸಬೇಕು. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಕಡ್ಡಾಯವಾಗಿ ಓದಿಸಬೇಕು ಎಂದರು.
ಸಂಸ್ಥೆಯ ವಿದ್ಯಾಸಂಸ್ಥೆಯ ಮುಖ್ಯಸ್ಥ ಡಾ.ಎನ್. ಶ್ರೀನಿವಾಸನ್, ಮುಖ್ಯ ಶಿಕ್ಷಕ ಸುರೇಶ್, ಶಿಕ್ಷಣ ಸಂಘದ ನೇಹಾ ಪ್ರಕಾಶ್, ಮುಖ್ಯೋಪಾಧ್ಯಾಯಿನಿ ವಿನೂತಾ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net