ಸರಗೂರು: ತಾಲೂಕು ಬಿಜೆಪಿ ಘಟಕದ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆಯಾಗಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಸಭೆ ನಡೆಸಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ 2016ರಿಂದ 2019ರವರೆಗೂ ಪಕ್ಷದ ತಾಲೂಕು ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿರುವುದರಿಂದ ಮತ್ತೆ ಎರಡನೇ ಬಾರಿಗೆ ಸರಗೂರು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಅವರನ್ನು ಆಯ್ಕೆ ಮಾಡಲಾಯಿತು.
ದಶಕಗಳಿಂದ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿರುವ ಚಾಮಲಾಪುರ ಸಿ.ಕೆ.ಗಿರೀಶ್ ಅವರನ್ನು ಸರ್ವಾನುಮತದಿಂದ ಮಂಡಲ ಅಧ್ಯಕ್ಷರಾಗಿ ಆಯ್ಕೆ ಘೊಷಿಸಲಾಯಿತು ಎಂದು ಗ್ರಾಮಾಂತರ ಜಿಲ್ಲಾಧ್ಯಕ್ಷ ಎನ್.ಕೆ.ಸುಬ್ಬಣ್ಣ ತಿಳಿಸಿದ್ದಾರೆ.
ನೂತನವಾಗಿ ಅಧ್ಯಕ್ಷರಾದ ಚಾಮಲಾಪುರ ಸಿ.ಕೆ.ಗಿರೀಶ್ ಮಾತನಾಡಿ, ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟನೆ ಮಾಡಲು ಜಿಲ್ಲಾದ್ಯಂತ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ವಿವಿಧ ಹಂತದಲ್ಲಿ ಸಂಘನೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.