ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಅಪರಾಧ
ಅಪರಾಧ
Published on

ಪ್ರಮುಖ ಮುಖ್ಯಾಂಶಗಳು

  • ಒಬ್ಬರಿಗೆ ಗಾಯ * ಆರು ಜನರ ಬಂಧನ
  • ಕ್ರಿಕೆಟ್ ಆಡುವ ವಿಚಾರದಲ್ಲಿ ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಗಲಾಟೆ
  • ಕೈಯಲ್ಲಿ ಲಾಂಗ್ ಹಿಡಿದು ಬೈಕ್ ಮೇಲೆ ಕುಳಿತಿರುವವನ ಕಡೆಗೆ ನುಗ್ಗಿ ಬಂದು ಹೊಡೆಯಲು ಯತ್ನ
ಮೈಸೂರು: ರಾಜೀವ್‌ನಗರ 2ನೇ ಹಂತದಲ್ಲಿ ಕ್ರಿಕೆಟ್ ಆಟದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆದಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.  ಈ ಸಂಬಂಧ ಆರು ಜನರನ್ನು ಬಂಧಿಸಲಾಗಿದೆ.
ಮಕ್ಕಳು ಮನೆ ಮುಂದೆ ಕ್ರಿಕೆಟ್ ಆಡುವ ವಿಚಾರದಲ್ಲಿ ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಗಲಾಟೆ ಶುರುವಾಗಿದ್ದು, ಸಾರ್ವಜನಿಕರು ತಿರುಗಾಡುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ಗೂಂಡಾ ವರ್ತನೆ ತೋರಿದ್ದಾರೆ. ಮಹಿಳೆಯರ ಎದುರೇ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಕೆಂಪು ಅಂಗಿ ಧರಿಸಿರುವ ವ್ಯಕ್ತಿಯೊಬ್ಬ ಕೈಯಲ್ಲಿ ಲಾಂಗ್ ಹಿಡಿದು ಬೈಕ್ ಮೇಲೆ ಕುಳಿತಿರುವವನ ಕಡೆಗೆ ನುಗ್ಗಿ ಬಂದು ಹೊಡೆಯಲು ಯತ್ನಿಸುತ್ತಾನೆ. ಆಗ ಮತ್ತೊಬ್ಬ ಬಂದು ಆತನನ್ನು ತಡೆದು ವಾಪಸ್ ಕರೆದುಕೊಂಡು ಹೋಗುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದು, 6 ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net