ಮೈಸೂರು ನಗರದಲ್ಲಿ ಸ್ವಚ್ಛತಾ ರೋಡ್ ಶೋ

ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಭಾನುವಾರ ಮೈಸೂರು ನಗರದಲ್ಲಿ ಸ್ವಚ್ಛತಾ ರೋಡ್ ಶೋ ನಡೆಯಿತು.
ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಭಾನುವಾರ ಮೈಸೂರು ನಗರದಲ್ಲಿ ಸ್ವಚ್ಛತಾ ರೋಡ್ ಶೋ ನಡೆಯಿತು.
Published on
ಮೈಸೂರು: ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಗರ ಪಾಲಿಕೆ ವತಿಯಿಂದ ಭಾನುವಾರ ನಗರದಲ್ಲಿ ಸ್ವಚ್ಛತಾ ರೋಡ್ ಶೋ ಆಯೋಜಿಸಲಾಗಿತ್ತು.
ರೋಡ್ ಶೋಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ಸ್ವಚ್ಛತೆ, ಮಾದಕ ವಸ್ತುಗಳ ದುಷ್ಪರಿಣಾಮ, ಆರೋಗ್ಯದ ಬಗ್ಗೆ ಕಾಳಜಿ ಕುರಿತು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಸರ್ಕಾರದೊಂದಿಗೆ ಸಹಕರಿಸಿ ಕೈಜೋಡಿಸಬೇಕು ಎಂದರು.
ನಗರ ವಿಶ್ವವಿಖ್ಯಾತವಾಗಲು ಕಾರಣಕರ್ತರು ನಾಲ್ವಡಿ ಕೃಷ್ಣರಾಜ ಒಡೆಯರ್. ಅವರು ನಮಗೆ ನೀಡಿರುವ ಮೈಸೂರು ನಗರವನ್ನು ಸ್ವಚ್ಛವಾಗಿ ಕಪಾಡಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ. ಸ್ವಚ್ಚತೆ ಕಪಾಡುತ್ತಿರುವ ಸ್ವಚ್ಛತಾ ಸಿಪಾಯಿಗಳು ಪೌರಕಾರ್ಮಿಕರನ್ನು ಅಭಿನಂದಿಸುತ್ತೇನೆ. ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಸಾರ್ವಜನಿಕ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಉಗುಳುವುದು, ಕಸ ಹಾಕುವುದು, ಸಾಕು ಪ್ರಾಣಿಗಳಿಂದ ಮಲ ಮೂತ್ರ ವಿಸರ್ಜನೆ ಮಾಡಿಸುವ ಪ್ರವೃತ್ತಿಯನ್ನು ತೊರೆಯಬೇಕು. ಶಿಸ್ತು ರೂಡಿಸಿಕೊಂಡರೆ ಮೈಸೂರು ನಗರ ಕೂಡ ಸುಂದರವಾಗುತ್ತದೆ ಎಂದರು.
ರೋಡ್ ಶೋ ನಲ್ಲಿ ವಿಂಟೇಜ್ ಕಾರುಗಳು, ಬೈಕ್ ಸವಾರರು, ಕಲಾ ತಂಡ, ಪೌರಕಾರ್ಮಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಭಾಗವಹಿಸಿ ಸ್ವಚ್ವತೆಯ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net