

ಮೈಸೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು. ನಗರದ ಕಾರಂಜಿಕೆರೆಯಿಂದ ಕುರುಬಾರಹಳ್ಳಿ ವೃತ್ತದವರೆಗೆ ತೆರೆದ ವಾಹನದಲ್ಲಿ ರೋಡ್‌ಶೋ ನಡೆಸಿದ ಅವರು, ಮಾರ್ಗದುದ್ದಕ್ಕೂ ನೆರೆದಿದ್ದ ಕಾರ್ಯಕರ್ತರ ಅಭಿನಂದನೆಗಳನ್ನು ಸ್ವೀಕರಿಸಿದರು.