ಮುನಿಸು ಮರೆತು ಹಳೆಯ ಸ್ನೇಹಿತ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎಂ ಇಬ್ರಾಹಿಂ

ಸಾಂದರ್ಭಿಕ ಸಂಗ್ರಹ ಚಿತ್ರ
ಸಾಂದರ್ಭಿಕ ಸಂಗ್ರಹ ಚಿತ್ರ
Published on

ಕಳೆದ ಕೆಲವು ಸಮಯದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತೀವ್ರ ಭಿನ್ನಾಭಿಪ್ರಾಯ ಹೊಂದಿದ್ದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಅಂತಿಮವಾಗಿ ತಮ್ಮ ಹಳೆಯ ಮುನಿಸನ್ನು ಮರೆತು ನಗರದಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಆದರೆ, ಈ ಎಲ್ಲ ಹಳೆಯ ವಾಗ್ದಾಳಿ ಹಾಗೂ ರಾಜಕೀಯ ವೈಮನಸ್ಸನ್ನು ಬದಿಗೊತ್ತಿ, ಸ್ವತಃ ಇಬ್ರಾಹಿಂ ಅವರೇ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಭೇಟಿಯ ವೇಳೆ ಇಬ್ಬರೂ ನಾಯಕರು ಅತ್ಯಂತ ಸೌಹಾರ್ದಯುತವಾಗಿ ಮಾತುಕತೆ ನಡೆಸಿದ್ದು, ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯ ಸನ್ನಿವೇಶದಲ್ಲಿ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿದೆ. ಈ ಭೇಟಿಯ ಕುರಿತು ಇಬ್ಬರು ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net