ಪಿರಿಯಾಪಟ್ಟಣಕ್ಕೆ 21ರಂದು ಸಿಎಂ ಆಗಮನ

ಪಿರಿಯಾಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ.ಹೊಲದಪ್ಪ ಇದ್ದಾರೆ.
ಪಿರಿಯಾಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ.ಹೊಲದಪ್ಪ ಇದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • 419.78 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
  • ಸಚಿವ ಕೆ.ವೆಂಕಟೇಶ್ ಮಾಹಿತಿ
ಪಿರಿಯಾಪಟ್ಟಣ: ತಾಲೂಕಿನಲ್ಲಿ 419.78 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ. 21ರಂದು ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಪಿರಿಯಾಪಟ್ಟಣದ ಶಕ್ತಿ ದೇವತೆಯಾದ ಶ್ರೀ ಮಸಣಿಕಮ್ಮ ದೇವಸ್ಥಾನ ಮರು ನಿರ್ಮಾಣ, ತಾಲೂಕು ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ, ಬೆಟ್ಟದಪುರದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಒಟ್ಟು 419.78 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಿಎಂ ನೆರವೇರಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಈಶ್ವರ್ ಖಂಡ್ರೆ, ಎನ್.ಚಲುವರಾಯಸ್ವಾಮಿ, ಶಿವರಾಜ್ ಸಂಗಪ್ಪ ತಂಗಡಗಿ, ಡಾ.ಎಂ.ಸಿ.ಸುಧಾಕರ್, ಎನ್.ಎಸ್.ಬೋಸರಾಜು ಉಪಸ್ಥಿತರಿರಲಿದ್ದಾರೆ. ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನಿಲ್ ಬೋಸ್, ಶಾಸಕರಾದ ಸಿ.ಅನಿಲ್ ಕುಮಾರ್, ಎ.ಬಿ.ರಮೇಶ್ ಬಂಡಿ ಸಿದ್ದೇಗೌಡ, ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು.ಜಿ.ಮಾದೇಗೌಡ, ಡಿ.ರವಿಶಂಕರ್, ಜಿ.ಡಿ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ಡಾ.ಯತೀಂದ್ರ ಸಿದ್ದರಾಮಯ್ಯ, ಕೆ.ವಿವೇಕಾನಂದ, ಕೆ.ಶಿವಕುಮಾರ್, ಎಂಪಿವಿಎಲ್ ಅಧ್ಯಕ್ಷ ಎಚ್.ಡಿ.ಗಣೇಶ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ.ಮಾನಸ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಪಿರಿಯಾಪಟ್ಟಣದಿಂದ ಪಾರೆಕೊಪ್ಪಲು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಕುವೆಂಪು ಭವನ ನಿರ್ಮಾಣಕ್ಕೆ ನಿಗದಿಪಡಿಸಿರುವ ಜಾಗದಲ್ಲಿ ಬೃಹತ್ ವೇದಿಕೆ ಮತ್ತು ಪೆಂಡಾಲ್ ನಿರ್ಮಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಏ. 21ರಂದು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 10 ರಿಂದ 12 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಎಲ್ಲರಿಗೂ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೆ.ಹೊಲದಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net